ಮಂಗಳವಾರ, ನವೆಂಬರ್ 29, 2022
29 °C

ಬೆಂಗಳೂರು | ಕೋವಿಡ್: ವಾರದಲ್ಲಿ 548 ಪ್ರಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದಲ್ಲಿ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದ್ದು, ಕಳೆದೊಂದು ವಾರದಲ್ಲಿ 548 ಮಂದಿ ಸೋಂಕಿತರಾಗಿದ್ದಾರೆ. 

ಕಳೆದ ತಿಂಗಳು ಬಹುತೇಕ ವಾರಗಳಲ್ಲಿ ಸಾವಿರಕ್ಕೂ ಅಧಿಕ ಪ‍್ರಕರಣಗಳು ದೃಢಪಟ್ಟಿದ್ದವು. ವಾರದಲ್ಲಿ 54,740 ಪರೀಕ್ಷೆಗಳನ್ನು ನಡೆಸಲಾಗಿದೆ. ಸೋಂಕು ದೃಢ ಪ್ರಮಾಣ ಶೇ 1ರಷ್ಟಿದೆ. ಏಳು ದಿನಗಳ ಅವಧಿಯಲ್ಲಿ 398 ಮಂದಿ ಚೇತರಿಸಿಕೊಂಡಿದ್ದಾರೆ. ಈ ಅವಧಿಯಲ್ಲಿ ಸೋಂಕಿತರೊಬ್ಬರು ಮೃತಪಟ್ಟಿದ್ದಾರೆ. 

ಕೋವಿಡ್ ಹೊಸ ಪ್ರಕರಣಗಳ ಜತೆಗೆ ಆಸ್ಪತ್ರೆ ದಾಖಲಾತಿಯೂ ಇಳಿಕೆಯಾಗಿದೆ. ಸಕ್ರಿಯ ಪ್ರಕರಣಗಳು 2,300ರ ಗಡಿಯೊಳಗಿದ್ದು, ಸೋಂಕಿತರಲ್ಲಿ 17 ಮಂದಿ ಆಸ್ಪತ್ರೆ ಚಿಕಿತ್ಸೆಗೆ ಒಳಗಾಗಿದ್ದಾರೆ. ಅವರಲ್ಲಿ ಐವರು ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಒಬ್ಬರಿಗೆ ಎಚ್‌ಡಿಯು ಹಾಸಿಗೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 11 ಮಂದಿಗೆ ಸಾಮಾನ್ಯ ಹಾಸಿಗೆಯಲ್ಲಿಯೇ ಚಿಕಿತ್ಸೆ ಒದಗಿಸಲಾಗುತ್ತಿದೆ. ನಗರದಲ್ಲಿ ಈವರೆಗೆ ವರದಿಯಾದ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 18.72 ಲಕ್ಷ ತಲುಪಿದೆ. ಸೋಂಕಿತರಲ್ಲಿ 18.52 ಲಕ್ಷ ಮಂದಿ ಚೇತರಿಸಿಕೊಂಡಿದ್ದಾರೆ. 

ಈವರೆಗೆ ವರದಿಯಾದ ಕೋವಿಡ್ ಪ್ರಕರಣಗಳಲ್ಲಿ ಶೇ 98.97ರಷ್ಟು ಮಂದಿ ಚೇತರಿಸಿಕೊಂಡಿದ್ದಾರೆ. ಮರಣ ಪ್ರಮಾಣ ದರವು ಶೇ 0.18ರಷ್ಟಿದೆ. 

ದೇಶದ ಪ್ರಮುಖ ಮಹಾನಗರಗಳಿಗೆ ಹೋಲಿಸಿದರೆ ಅಧಿಕ ಸಕ್ರಿಯ ಪ್ರಕರಣಗಳನ್ನು ಹೊಂದಿರುವ ಮಹಾನಗರಗಳಲ್ಲಿ ಬೆಂಗಳೂರು ದ್ವಿತೀಯ ಸ್ಥಾನದಲ್ಲಿದೆ. ಚೆನ್ನೈನಲ್ಲಿ 2,300ಕ್ಕೂ ಅಧಿಕ ಪ್ರಕರಣಗಳಿವೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು