ಬೆಂಗಳೂರು: ಮೈಸೂರಿನಲ್ಲಿ ಇದೇ 25ರಂದು ಮರಣ ಹೊಂದಿದ 63 ವರ್ಷದ ವ್ಯಕ್ತಿ ಕೋವಿಡ್ ಪೀಡಿತರಾಗಿದ್ದರು ಎನ್ನುವುದು ಪರೀಕ್ಷಾ ವರದಿಯಿಂದ ದೃಢಪಟ್ಟಿದೆ. ಇದರಿಂದಾಗಿ ರಾಜ್ಯದಲ್ಲಿ ಈ ವರ್ಷ ವರದಿಯಾದ ಒಟ್ಟು ಕೋವಿಡ್ ಮರಣ ಪ್ರಕರಣಗಳ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ಮೂತ್ರಪಿಂಡ ವೈಫಲ್ಯದ ಕಾರಣ ಇದೇ 15 ರಂದು ಅವರು ಅಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಉಸಿರಾಟದ ಸಮಸ್ಯೆಯೂ ಕಾಣಿಸಿಕೊಂಡಿತ್ತು. ಆದ್ದರಿಂದ, ಕೋವಿಡ್ ಪರೀಕ್ಷೆಗೆ ಅವರ ಗಂಟಲ ದ್ರವದ ಮಾದರಿಯನ್ನು ಸಂಗ್ರಹಿಸಲಾಗಿತ್ತು. ಈ ಪ್ರಕರಣದ ಪರೀಕ್ಷಾ ವರದಿ ಶುಕ್ರವಾರ ಬಂದಿದ್ದು, ಕೊರೊನಾ ಸೋಂಕಿತರಾಗಿದ್ದರು ಎನ್ನುವುದು ಖಚಿತಪಟ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರುಗತಿ ಪಡೆದಿದೆ. ಶುಕ್ರವಾರ 114 ಪ್ರಕರಣಗಳು ಹೊಸದಾಗಿ ವರದಿಯಾಗಿವೆ. ಈ ವರ್ಷ ವರದಿಯಾದ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 367ಕ್ಕೆ ಏರಿಕೆಯಾಗಿದೆ.

24 ಗಂಟೆಗಳ ಅವಧಿಯಲ್ಲಿ 460 ಮಾದರಿಗಳ ಪರೀಕ್ಷೆ ಮಾಡಲಾಗಿದೆ. ಸೋಂಕು ದೃಢ ಪ್ರಮಾಣ ಶೇಕಡ 24.7ಕ್ಕೆ ಏರಿಕೆಯಾಗಿದೆ. ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 234ಕ್ಕೆ ತಲುಪಿದೆ. ಈ ಪ್ರಕರಣಗಳಲ್ಲಿ 223 ಮಂದಿ ಮನೆ ಆರೈಕೆಗೆ ಒಳಗಾಗಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.