ಭಾನುವಾರ, ಆಗಸ್ಟ್ 9, 2020
21 °C

ಬೆಂಗಳೂರು | ಒಂದೇ ದಿನ 26 ‍ಪೊಲೀಸರಿಗೆ ಕೋವಿಡ್‌–19 ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪೊಲೀಸರಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಶನಿವಾರ ಒಂದೇ ದಿನದಲ್ಲೇ 26 ಪೊಲೀಸರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಅಗ್ನಿಶಾಮಕ ದಳದ 15 ಸಿಬ್ಬಂದಿಗೆ ಕೊರೊನಾ ಇರುವುದು ದೃಢಪಟ್ಟಿದೆ. ಸಿಸಿಬಿ ಹಾಗೂ ನಗರದ ವಿವಿಧ ಠಾಣೆಯ 11 ಸಿಬ್ಬಂದಿಯಲ್ಲೂ ಸೋಂಕು ಇರುವುದು ಪರೀಕ್ಷೆಯಿಂದ ಗೊತ್ತಾಗಿದೆ.

ಸೋಂಕಿತರ ಸಂಪರ್ಕದಲ್ಲಿದ್ದ 150ಕ್ಕೂ ಹೆಚ್ಚು ಮಂದಿಯ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ. ಅವರನ್ನು ಕ್ವಾರಂಟೈನ್ ಮಾಡಲಾಗಿದೆ‌.

ಸಾಮೂಹಿಕ ಪರೀಕ್ಷೆ: ಪೊಲೀಸರಲ್ಲಿ ಸೋಂಕು ಹೆಚ್ಚಾಗುತ್ತಿರುವುದರಿಂದ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಶನಿವಾರದಿಂದ ಸಿಬ್ಬಂದಿಯನ್ನು ಸಾಮೂಹಿಕವಾಗಿ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಪ್ರತಿಯೊಬ್ಬ ಸಿಬ್ಬಂದಿಯ ಗಂಟಲಿನ ದ್ರವ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗುತ್ತಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು