ಸೋಮವಾರ, ಜೂನ್ 21, 2021
27 °C
ಬಾಗಲಗುಂಟೆಯಲ್ಲಿ ಕೋವಿಡ್‌ ಆರೈಕೆ ಕೇಂದ್ರಕ್ಕೆ ಚಾಲನೆ

ಸಂಪರ್ಕಕ್ಕೆ ಸಿಗದ 3 ಸಾವಿರ ಸೋಂಕಿತರು: ಆರ್‌.ಅಶೋಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಪೀಣ್ಯದಾಸರಹಳ್ಳಿ: ’ಕೋವಿಡ್ ದೃಢಪಟ್ಟವರು ಮೊಬೈಲ್ ಸ್ವಿಚ್ ಆಫ್ ಮಾಡಿಕೊಳ್ಳುತ್ತಿದ್ದು, ಅಂಥವರನ್ನ ಹುಡುಕುವುದು ಮತ್ತು ಸಂಪರ್ಕಿಸುವುದು ಕಷ್ಟವಾಗುತ್ತಿದೆ. ಸುಮಾರು 3 ಸಾವಿರ ಜನರು ಹೀಗೆ ಸಂಪರ್ಕಕ್ಕೆ ಸಿಗದೆ ತಪ್ಪಿಸಿಕೊಂಡಿದ್ದಾರೆ‘ ಎಂದು ಕಂದಾಯ ಸಚಿವ ಆರ್‌.ಅಶೋಕ ಹೇಳಿದರು.

ಬಾಗಲಗುಂಟೆಯ ಮಂಜುನಾಥನಗರದಲ್ಲಿರುವ ಕಾರ್ಮಿಕ ಸಮುದಾಯ ಭವನದಲ್ಲಿ ಬಿಬಿಎಂಪಿ ನಿರ್ಮಿಸಿರುವ 130 ಹಾಸಿಗೆ ಸಾಮರ್ಥ್ಯದ ಕೋವಿಡ್ ಕೇರ್ ಸೆಂಟರ್ ಉದ್ಘಾಟಿಸಿ ಮಾತನಾಡಿದರು.

’ಹೀಗೆ ಸಂಪರ್ಕಕ್ಕೆ ಸಿಗದವರ ಟ್ರಾಕಿಂಗ್ ಅನ್ನು ಪೊಲೀಸರು ಮಾಡುತ್ತಿದ್ದಾರೆ. ತೀರಾ ಉಸಿರಾಟದ ಸಮಸ್ಯೆ ಆದಾಗ ಆಸ್ಪತ್ರೆಗಳಲ್ಲಿ ಐಸಿಯು ಹಾಸಿಗೆ ಬೇಕೆಂದು ಬರುತ್ತಿದ್ದಾರೆ. ಮುಂಚಿತವಾಗಿಯೇ ಕೋವಿಡ್ ಪಾಸಿಟಿವ್ ಎಂದು ತಿಳಿದ ತಕ್ಷಣ ಐಸೋಲೇಟ್ ಆಗಿ ಔಷಧ, ಮಾತ್ರೆಗಳನ್ನು ಸರಿಯಾಗಿ ತೆಗೆದುಕೊಂಡಾಗ ಕೋವಿಡ್ ಸೋಂಕು ಹರಡುವುದನ್ನು ತಡೆಯಬಹುದಾಗಿದೆ‘ ಎಂದರು.

'ಈ ಕೇಂದ್ರದಲ್ಲಿ 130 ಹಾಸಿಗೆಗಳ ವ್ಯವಸ್ಥೆ ಇದ್ದು, ಇಲ್ಲಿಗೆ ಬರುವ ರೋಗಿಗಳಿಗೆ ಅತ್ಯುತ್ತಮ ಸೌಲಭ್ಯಗಳ ವ್ಯವಸ್ಥೆ ಮಾಡಲಾಗಿದೆ. ಶೌಚಾಲಯ, ಸ್ನಾನದ ಗೃಹಗಳು, ಊಟದ ವ್ಯವಸ್ಥೆ ಇರುತ್ತದೆ' ಎಂದು ಹೇಳಿದರು.

'ಸ್ಥಳೀಯ ಶಾಸಕ ಮಂಜುನಾಥ್ ಅವರು 20 ಐಸಿಯು ಬೆಡ್ ವ್ಯವಸ್ಥೆ ಮಾಡುವಂತೆ ಕೋರಿದ್ದಾರೆ. ಅದನ್ನು ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ‘ ಎಂದರು.

ಶಾಸಕ ಆರ್.ಮಂಜುನಾಥ್ 'ಈ ಭಾಗದಲ್ಲಿ ಕಾರ್ಮಿಕರು ಹಾಗೂ ಮಧ್ಯಮವರ್ಗ ಹೆಚ್ಚಾಗಿ ವಾಸಿಸುತ್ತಿದ್ದು ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯುವ ಮೂಲಕ ನೀವು ಮತ್ತು ನಿಮ್ಮ ಕುಟುಂಬ ಸುರಕ್ಷಿತವಾಗಿ ನೋಡಿಕೊಳ್ಳಬೇಕು' ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು