ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾಸಗಿ ಆಸ್ಪತ್ರೆಗಳು: ಆಮ್ಲಜನಕ ಘಟಕ ಅಳವಡಿಕೆ ಕಡ್ಡಾಯ

Last Updated 4 ಜೂನ್ 2021, 16:31 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿನ 50ಕ್ಕಿಂತ ಹೆಚ್ಚು ಹಾಸಿಗೆಗಳನ್ನು ಹೊಂದಿರುವ ಎಲ್ಲ ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ ವೈದ್ಯಕೀಯ ಆಮ್ಲಜನಕದ ಘಟಕಗಳನ್ನು ಅಳವಡಿಸಿಕೊಳ್ಳಬೇಕು ಎಂದು ಆರೊಗ್ಯ ಇಲಾಖೆ ಸೂಚಿಸಿದೆ.

ಈ ಬಗ್ಗೆ ಇಲಾಖೆ ಆಯುಕ್ತ ಡಾ. ತ್ರಿಲೋಕ್ ಚಂದ್ರ ಅವರು ಸುತ್ತೋಲೆ ಹೊರಡಿಸಿದ್ದಾರೆ. ‘ಕೋವಿಡ್‌ ಪ್ರಕರಣಗಳ ಸಂಖ್ಯೆ ಏರಿಕೆಯಾದ ಬಳಿಕ ವೈದ್ಯಕೀಯ ಆಮ್ಲಜನಕದ ಬೇಡಿಕೆ ಹೆಚ್ಚಳವಾಗಿದೆ. ಭವಿಷ್ಯದಲ್ಲಿ ಇದೇ ರೀತಿಯ ಪರಿಸ್ಥಿತಿ ಉಂಟಾದಲ್ಲಿ ವೈದ್ಯಕೀಯ ಆಮ್ಲಜನಕಕ್ಕೆ ಹೊರಗಿನ ಮೂಲಗಳ ಅವಲಂಬನೆಯನ್ನು ಕಡಿಮೆ ಮಾಡಬೇಕು. ಹಾಗಾಗಿ, ಆಸ್ಪತ್ರೆಗಳು ಸಾಮಾನ್ಯ ದಿನಗಳಲ್ಲಿ ಅಗತ್ಯವಿರುವಷ್ಟು ಆಮ್ಲಜನಕವನ್ನಾದರೂ ಹೊಂದಿರುವ ಮರುಪೂರಣ ಘಟಕಗಳನ್ನು ಅಳವಡಿಸಿಕೊಳ್ಳಬೇಕು’ ಎಂದು ತಿಳಿಸಿದ್ದಾರೆ.

‘100 ಹಾಸಿಗೆಗಳು ಹಾಗೂ ಅದಕ್ಕಿಂತ ಹೆಚ್ಚಿನ ಹಾಸಿಗೆಗಳನ್ನು ಹೊಂದಿರುವ ಆಸ್ಪತ್ರೆಗಳು ಸಾಮಾನ್ಯ ದಿನಗಳ ಬೇಡಿಕೆಯ ಎರಡು ಪಟ್ಟು ವೈದ್ಯಕೀಯ ಆಮ್ಲಜನಕ ಶೇಖರಣಾ ಸಾಮರ್ಥ್ಯದ ಘಟಕವನ್ನು ಹೊಂದಿರಬೇಕು. ನಾಲ್ಕು ತಿಂಗಳೊಳಗೆ ಇದು ಸಾಕಾರವಾಗಬೇಕು’ ಎಂದು ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT