ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಂದು ಸಾವಿರ ಪಲ್ಸ್ ಆಕ್ಸಿಮೀಟರ್ ವಿತರಣೆ

Last Updated 26 ಮೇ 2021, 21:49 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ದಕ್ಷಿಣ ಭಾಗದಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಕಂದಾಯ ಸಚಿವ ಆರ್.ಅಶೋಕ ಅವರು 1,000 ಪಲ್ಸ್ ಆಕ್ಸಿಮೀಟರ್‌ಗಳನ್ನು ವಿತರಿಸಿದರು.

ಬಳಿಕ ಮಾತನಾಡಿದ ಅವರು,‘ಅಮೆರಿಕದ ವಾಷಿಂಗ್ಟನ್ ಡಿಸಿಯಲ್ಲಿರುವ ಒಎಸ್ಎ ಪ್ರತಿಷ್ಠಾನವು ಕೊಡುಗೆಯಾಗಿ ನೀಡಿರುವ ಒಂದು ಸಾವಿರ ಪಲ್ಸ್ ಆಕ್ಸಿಮೀಟರ್‌ಗಳನ್ನು ಭಾರತೀಯ ಕೈಗಾರಿಕೆಗಳ ಒಕ್ಕೂಟದ ಮೂಲಕ ಕಂದಾಯ ಇಲಾಖೆ ಪಡೆದುಕೊಂಡಿದೆ’ ಎಂದರು.

‘ಬೆಂಗಳೂರು ದಕ್ಷಿಣದ ಆರು ಕ್ಷೇತ್ರಗಳಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಈ ಪಲ್ಸ್ ಆಕ್ಸಿಮೀಟರ್‌ಗಳನ್ನು ಬಳಕೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT