ಕೋವಿಡ್ ಮೃತರ ಕುಟುಂಬಕ್ಕೆ ₹25 ಸಾವಿರ ಚೆಕ್ ವಿತರಣೆ

ಬೆಂಗಳೂರು: ‘ಕೋವಿಡ್ ಸಂಕಷ್ಟದ ಕಾಲದಲ್ಲಿ ಜನರ ಸಮಸ್ಯೆಗಳಿಗೆ ಬಿಜೆಪಿ ಸ್ಪಂದಿಸಲಿಲ್ಲ. ಆದರೆ, ಕಾಂಗ್ರೆಸ್ ಪಕ್ಷ ‘ಸಹಾಯಹಸ್ತ ಅಭಿಯಾನ’ದಡಿ ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಗಳ ನೆರವಿಗೆ ನಿಂತಿದೆ’ ಎಂದು ಶಾಸಕ ಬೈರತಿ ಸುರೇಶ್ ತಿಳಿಸಿದರು.
ಹೆಬ್ಬಾಳ ಕ್ಷೇತ್ರದಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಗಳಿಗೆ ವೈಯಕ್ತಿಕವಾಗಿ ತಲಾ ₹25 ಸಾವಿರದ ಚೆಕ್ ವಿತರಿಸಿ ಅವರು ಮಾತನಾಡಿದರು.
‘ಕ್ಷೇತ್ರದಲ್ಲಿ ಕೊರೊನಾದಿಂದ ಮೃತಪಟ್ಟವರಿಗೆ ₹3 ಲಕ್ಷ ವೆಚ್ಚದಲ್ಲಿ ಸಹಾಯಧನ, ದಿನಸಿ ಕಿಟ್ ಹಾಗೂ ಹಣ್ಣು–ಹಂಪಲಿನ ಕಿಟ್‌ಗಳನ್ನು ವಿತರಿಸಲಾಗುತ್ತಿದೆ’ ಎಂದರು.
ಆರ್ಥಿಕ ನೆರವು ನೀಡುವ ಕಾರ್ಯಕ್ರಮಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ಕೆಪಿಸಿಸಿ ಉಪಾಧ್ಯಕ್ಷ ಬಿ.ಎಲ್.ಶಂಕರ್, ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಜ್ ಕುಮಾರ್ ಚಾಲನೆ ನೀಡಿದರು.
ಸ್ಥಳೀಯ ಮುಖಂಡರಾದ ಅಬ್ದುಲ್ ವಾಜೀದ್, ಆನಂದ್ ಕುಮಾರ್, ಹೆಬ್ಬಾಳ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.