ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಹರಡುವಿಕೆ ತಡೆಗೆ ವಾರಾಂತ್ಯ ಕರ್ಫ್ಯೂ: ಬೆಂಗಳೂರಿನಲ್ಲಿ ಬಂದ್ ವಾತಾವರಣ

Last Updated 24 ಏಪ್ರಿಲ್ 2021, 7:55 IST
ಅಕ್ಷರ ಗಾತ್ರ

ಬೆಂಗಳೂರು: ಉಲ್ಬಣಗೊಂಡಿರುವ ಕೋವಿಡ್‌ ನಿಯಂತ್ರಣಕ್ಕೆ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಿದ್ದು, ನಗರದಲ್ಲಿ ಬಂದ್ ರೀತಿಯ ವಾತಾವರಣ ನಿರ್ಮಾಣವಾಗಿದೆ.

ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ ಕೆಲಕಾಲ ಬಿಡುವು ನೀಡಲಾಗಿತ್ತು. 10 ಗಂಟೆ ನಂತರ ಪೊಲೀಸರು ಬಿಗಿ ಕ್ರಮಕ್ಕೆ ಮುಂದಾಗಿದ್ದಾರೆ. ಅನಾವಶ್ಯಕವಾಗಿ ಜನ ಓಡಾಟಕ್ಕೆ ನಿಯಂತ್ರಣ ಹಾಕಲಾಗಿದೆ. ಅದನ್ನೂ ಮೀರಿ ರಸ್ತೆಗೆ ಬಂದವರಿಗೆ ಮೇಲೆ ಪೊಲೀಸರು ಲಾಠಿ ಬೀಸುತ್ತಿದ್ದಾರೆ.

ಅಲ್ಲದೇ ಬೈಕ್ ಮತ್ತು ಇತರೆ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದುಕೊಳ್ಳುತ್ತಿದ್ದಾರೆ. ಬೈಕ್‌ಗಳನ್ನು ಬಿಡಿಸಿಕೊಳ್ಳಲು ಪೊಲೀಸ್ ಠಾಣೆಗಳ ಮುಂದೆ ಜನ ಜಮಾಯಿಸುತ್ತಿದ್ದಾರೆ.

ನಗರದ ಹೃದಯ ಭಾಗವಾಗಿರುವ ಮೆಜೆಸ್ಟಿಕ್ ಬಸ್​ ನಿಲ್ದಾಣದಲ್ಲಿ ಬೆರಳೆಣಿಕೆಯಷ್ಟು ಬಸ್​ಗಳು ಸಂಚರಿಸುತ್ತಿದ್ದು, ಅಗತ್ಯ ಸೇವೆಗಷ್ಟೇ ಬಿಎಂಟಿಸಿ ಬಸ್‌ಗಳನ್ನು ಮೀಸಲಿಡಲಾಗಿದೆ. ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಪ್ರಯಾಣಿಕರ ಓಡಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ, ಬಸ್‌ಗಳ ಸಂಖ್ಯೆ ಕಡಿಮೆ ಇವೆ.

ಇವೆಲ್ಲದರ ನಡುವೆ ಕೆ.ಆರ್‌.ಪುರ ಮಾರುಕಟ್ಟೆಯಲ್ಲಿ ಎಂದಿನಂತೆ ಜನ ಜಂಗುಳಿ ಸೇರಿಕೊಂಡಿದೆ. ಅಗತ್ಯ ವಸ್ತುಗಳ ಖರೀದಿಗೆ ಜನ ಮುಗಿ ಬಿದ್ದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT