ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್: ₹ 30 ಲಕ್ಷ ಪರಿಹಾರಕ್ಕೆ ಆಗ್ರಹ

Last Updated 1 ಮೇ 2021, 21:35 IST
ಅಕ್ಷರ ಗಾತ್ರ

ಬೆಂಗಳೂರು: ‌‘ಕೋವಿಡ್‌ ಎರಡನೇ ಅಲೆಯ ಅವಧಿಯಲ್ಲಿ ಮೃತಪಟ್ಟ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಕುಟುಂಬಗಳಿಗೆ ತಲಾ ₹ 30 ಲಕ್ಷ ಪರಿಹಾರ ನೀಡಬೇಕು’ ಎಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘ ಆಗ್ರಹಿಸಿದೆ.

ಈ ಸಂಬಂಧ ಸಂಘದ ಗೌರವಾಧ್ಯಕ್ಷ ಆಯನೂರು ಮಂಜುನಾಥ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರಿಗೆ ಪತ್ರ ಬರೆದಿದ್ದಾರೆ.

‘ಕೋವಿಡ್ ಎರಡನೇ ಅಲೆಯಲ್ಲಿ ವೈರಾಣು ವೇಗವಾಗಿ ಹರಡುತ್ತಿದೆ. ಈ ವೇಳೆ ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಮುಂಚೂಣಿಯಲ್ಲಿ ನಿಂತು ಕೆಲಸ ಮಾಡುತ್ತಿದ್ದಾರೆ. ಈ ವೇಳೆ ಕೋವಿಡ್‌ನಿಂದ ಮೃತಪಟ್ಟ ನೌಕರರ ಕುಟುಂಬಕ್ಕೆ ತಲಾ ₹ 30 ಲಕ್ಷ ಪರಿಹಾರ ನೀಡಬೇಕು. ಅದೇ ರೀತಿ, ನೌಕರರು ಅಥವಾ ಅವರ ಕುಟುಂಬದ ಸದಸ್ಯರು ಕೋವಿಡ್ ಪೀಡಿತರಾದಲ್ಲಿ ಉತ್ತಮ ಚಿಕಿತ್ಸೆಗೆ ವ್ಯವಸ್ಥೆ ಹಾಗೂ ಚಿಕಿತ್ಸಾ ವೆಚ್ಚದ ಮರುಪಾವತಿಗೆ ಕ್ರಮಕೈಗೊಳ್ಳಬೇಕು’ ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT