ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಕೋವಿಡ್ ಆಸ್ಪತ್ರೆ ಮತ್ತು ರೋಗಿಗಳ ಮೇಲೆ ನಿಗಾ ಇಡಲು ನಿಯಂತ್ರಣ ಕೊಠಡಿಯೊಂದನ್ನು ಸ್ಥಾಪಿಸಬೇಕು ಎಂದು ವಿಧಾನಮಂಡಲದ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ (ಪಿಎಸಿ) ಬಿಬಿಎಂಪಿ ಆಯುಕ್ತರಿಗೆ ನಿರ್ದೇಶನ ನೀಡಿದೆ.

ಪಿಎಸಿ ಅಧ್ಯಕ್ಷ ಎಚ್.ಕೆ.ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ, ದಿನದ 24 ಗಂಟೆಗಳೂ ಆಸ್ಪತ್ರೆಯಲ್ಲಿ ಕೋವಿಡ್ ರೋಗಿಗಳಿಗೆ ಯಾವ ರೀತಿಯಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ ಎಂಬುದನ್ನು ಗಮನಿಸಲು ಸಾಧ್ಯ ಎಂದು ಹೇಳಿದರು.

ಆಸ್ಪತ್ರೆಗಳಿಗೆ ದಾಖಲಾದ ಕೋವಿಡ್ ರೋಗಿಗಳಿಗೆ ವೈದ್ಯರು ಮತ್ತು ಸಿಬ್ಬಂದಿ ಕಾಳಜಿಯಿಂದ ನೋಡಿಕೊಳ್ಳುತ್ತಿಲ್ಲ ಎಂಬ ದೂರುಗಳು ಬಂದಿವೆ. ನಿಯಂತ್ರಣ ಕೊಠಡಿಯಿಂದ ನಿಗಾ ಇಡುವ ಮೂಲಕ ದೂರುಗಳ ಬಗ್ಗೆ ಗಮನಹರಿಸಿದಂತೆಯೂ ಆಗುತ್ತದೆ ಎಂದು ಹೇಳಿದರು.

ಬೆಂಗಳೂರಿನ ಕೋವಿಡ್ ಚಿಕಿತ್ಸೆ ನೀಡುತ್ತಿರುವ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ಮೇಲೆ ನಿಗಾ ಇಡಬೇಕು. ಪ್ರತಿಯೊಬ್ಬ ರೋಗಿಗೂ ಹೇಗೆ ಚಿಕಿತ್ಸೆ ನೀಡಲಾಗುತ್ತಿದೆ. ಸಿಬ್ಬಂದಿ ನಿರ್ಲಕ್ಷ್ಯವಹಿಸುತ್ತಿದ್ದಾರೆಯೇ ಇಲ್ಲವೇ ಎಂಬುದನ್ನು ನೋಡಬಹುದಾಗಿದೆ ಎಂದು ಪಾಟೀಲ ಹೇಳಿದರು. ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಮತ್ತು ಹಿರಿಯ ಅಧಿಕಾರಿ ರಾಜೇಂದ್ರ ಕುಮಾರ್ ಕಟಾರಿಯಾ ಅವರು ಪಿಎಸಿ ಮುಂದೆ ಹಾಜರಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.