ಶುಕ್ರವಾರ, ಜುಲೈ 1, 2022
25 °C

ಕೋವಿಡ್: ತೀವ್ರ ನಿಗಾ ಘಟಕ ಸ್ಥಳಾಂತರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯ ಆವರಣದಲ್ಲಿರುವ ಟ್ರಾಮಾ ಕೇರ್ ಸೆಂಟರ್‌ನಲ್ಲಿ ದುರಸ್ತಿ ಕಾರ್ಯಗಳು ನಡೆಯುತ್ತಿರುವ ಕಾರಣ, ಅಲ್ಲಿನ ತೀವ್ರ ನಿಗಾ ಘಟಕ (ಐಸಿಯು) ಹಾಸಿಗೆಗಳನ್ನು ವಿಕ್ಟೋರಿಯಾ ಆಸ್ಪತ್ರೆಯ ಎಂಪಿಬಿ ಬ್ಲಾಕ್‌ನ (ಮಲ್ಟಿ ಪರ್ಪಸ್ ಕಟ್ಟಡ) ಮೂರನೇ ಮಹಡಿಗೆ ಸ್ಥಳಾಂತರ ಮಾಡಲಾಗಿದೆ.

ವಿಕ್ಟೋರಿಯಾ ಆಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯನ್ನಾಗಿ ಪರಿವರ್ತಿಸಿದ ಬಳಿಕ ಟ್ರಾಮಾ ಕೇರ್‌ ಸೆಂಟರ್‌ನಲ್ಲಿ ಕೂಡ ಸೋಂಕಿತರಿಗೆ ಚಿಕಿತ್ಸೆ ಒದಗಿಸಲಾಗುತ್ತಿದೆ. ಈಗ ದುರಸ್ತಿ ಕಾರ್ಯವನ್ನು ಕೈಗೊಳ್ಳಲಾಗಿದೆ. ಹೀಗಾಗಿ 30 ಐಸಿಯು ಹಾಸಿಗೆಗಳನ್ನು ಎಂಪಿಬಿ ಬ್ಲಾಕ್‌ನಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಅಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ಒದಗಿಸಲಾಗುತ್ತಿದೆ.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೋವಿಡ್ ರೋಗಿಗಳ ಚಿಕಿತ್ಸೆಗೆ 500 ಹಾಸಿಗೆಗಳನ್ನು ಮೀಸಲಿರಿಸಲಾಗಿದೆ. ಕೆಲ ದಿನಗಳಿಂದ ಕೋವಿಡ್ ಪೀಡಿತರ ಸಂಖ್ಯೆ ಇಳಿಕೆಯಾಗಿದ್ದು, ಸೋಂಕಿತರಲ್ಲಿ ಬಹುತೇಕರು ಮನೆಯಲ್ಲಿಯೇ ಆರೈಕೆ ಮಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ಆಸ್ಪತ್ರೆಯಲ್ಲಿ ಬಹುತೇಕ ಹಾಸಿಗೆಗಳು ಖಾಲಿಯಿವೆ. ಆದ್ದರಿಂದ ಟ್ರಾಮಾ ಕೇರ್ ಸೆಂಟರ್‌ನಲ್ಲಿ ದುರಸ್ತಿ ಕಾರ್ಯ ಪೂರ್ಣಗೊಂಡ ಬಳಿಕ ಅಲ್ಲಿ ಕೋವಿಡ್ ಪೀಡಿತರಿಗೆ 250 ಹಾಸಿಗೆಗಳನ್ನು ಮೀಸಲಿರಿಸಿ, ವಿಕ್ಟೋರಿಯಾದಲ್ಲಿ ಕೋವಿಡೇತರ ಕಾಯಿಲೆಗೆ ಚಿಕಿತ್ಸೆ ಪ್ರಾರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು