ಶನಿವಾರ, ಜುಲೈ 24, 2021
21 °C

ಬೆಂಗಳೂರು | ವೈಟ್‌ಫೀಲ್ಡ್ ವಿಭಾಗದ 15 ಪೊಲೀಸ್‌ ಸಿಬ್ಬಂದಿಯಲ್ಲಿ ಕೋವಿಡ್–19‌ ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವೈಟ್‌ಫೀಲ್ಡ್ ವಿಭಾಗದಲ್ಲಿ ಸೋಮವಾರ ಒಟ್ಟು 15 ಪೊಲೀಸ್‌ ಸಿಬ್ಬಂದಿಯಲ್ಲಿ ಕೋವಿಡ್‌ ದೃಢಪಟ್ಟಿದ್ದು, ಈ ಪೈಕಿ, 12 ಸಿಬ್ಬಂದಿ ಎಚ್ಎಎಲ್‌ ಪೊಲೀಸ್‌ ಠಾಣೆಯವರು ಎಂದು ಡಿಸಿಪಿ ಅನುಚೇತ್‌ ತಿಳಿಸಿದ್ದಾರೆ.

ಈ ವಿಭಾಗದಲ್ಲಿ ಈವರೆಗೆ ಒಟ್ಟು 27 ಪೊಲೀಸ್‌ ಸಿಬ್ಬಂದಿಗಳಲ್ಲಿ ಕೋವಿಡ್‌ 19 ದೃಢಪಟ್ಟಿದೆ. ಈ ಪೈಕಿ ಐದು ಮಂದಿ ಗುಣಮುಖರಾಗಿ ಬಿಡುಗಡೆ ಆಗಿದ್ದಾರೆ ಎಂದೂ ಅವರು ತಿಳಿಸಿದರು.

ಎಸ್‌ಎಎಲ್‌ ಠಾಣೆಯಲ್ಲಿ ಒಬ್ಬ ಪೊಲೀಸ್‌ ಸಿಬ್ಬಂದಿಗೆ ಜೂನ್‌ 27ರಂದು ಸೋಂಕು ದೃಢಪಟ್ಟಿತ್ತು. ಹೀಗಾಗಿ, ಅವರನ್ನು ಚಿಕಿತ್ಸೆಗಾಗಿ ಕೋವಿಡ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ನಂತರ ಠಾಣೆಯನ್ನು ಸೀಲ್‌ಡೌನ್‌ ಮಾಡಲಾಗಿದೆ. ಬಳಿಕ ಠಾಣೆಯ ಎಲ್ಲ ಪೊಲೀಸ್‌ ಸಿಬ್ಬಂದಿಯನ್ನು ತಪಾಸಣೆಗೆ ಒಳಪಡಿಸಲಾಗಿತ್ತು. ಅವರಲ್ಲಿ 12 ಮಂದಿಗೆ ಸೋಂಕು ಇರುವುದು ಸೋಮವಾರ ದೃಢಪಟ್ಟಿದೆ ಎಂದೂ ಅವರು ವಿವರಿಸಿದರು.

‘ಎಚ್‌ಎಎಲ್‌ ಠಾಣೆಯಲ್ಲಿ ಕೊನೆಯದಾಗಿ ಜೂನ್‌ 15ರಂದು ಆರೋಪಿಯೊಬ್ಬನ್ನು ಬಂಧಿಸಲಾಗಿತ್ತು. ಬಂಧಿತ ಎಲ್ಲ ಆರೋಪಿಗಳನ್ನು ತಪಾಸಣೆಗೆ ಒಳಪಡಿಸಲಾಗಿದ್ದು, ಯಾರಲ್ಲೂ ಸೋಂಕು ಕಂಡುಬಂದಿಲ್ಲ. ನಂತರ ಯಾರನ್ನೂ ಬಂಧಿಸಿಲ್ಲ. ಹೀಗಾಗಿ ಬಂಧಿತ ಆರೋಪಿಗಳಿಂದ ಸೋಂಕು ಹರಡಿದೆ ಎಂಬ ವದಂತಿ ಸುಳ್ಳು’ ಎಂದೂ ಅವರು ಅನುಚೇತ್‌ ಸ್ಪಷ್ಟಪಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು