ಬೆಂಗಳೂರು: ರಾಜ್ಯದಲ್ಲಿ ಗುರುವಾರ ಒಂದೇ ದಿನ 1,502 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಈವರೆಗೆ ಒಂದೇ ದಿನ ವರದಿಯಾದ ಗರಿಷ್ಠ ಪ್ರಕರಣಗಳು ಇವಾಗಿದ್ದು, ಸೋಂಕಿತರ ಸಂಖ್ಯೆ 18,016ಕ್ಕೆ ಏರಿಕೆಯಾಗಿದೆ.

ಸೋಂಕಿನಿಂದ ಬಳಲುತ್ತಿದ್ದವರಲ್ಲಿ ಮತ್ತೆ 19 ಮಂದಿ ಮೃತಪಟ್ಟಿದ್ದಾರೆ. ಬಳ್ಳಾರಿಯಲ್ಲಿ ನಾಲ್ಕು ಮಂದಿ, ದಕ್ಷಿಣ ಕನ್ನಡ ಹಾಗೂ ಬೆಂಗಳೂರಿನಲ್ಲಿ ತಲಾ ಮೂರು ಮಂದಿ, ಉತ್ತರ ಕನ್ನಡದಲ್ಲಿ ಇಬ್ಬರು ಹಾಗೂ ಮೈಸೂರು, ಉಡುಪಿ, ಕೊಪ್ಪಳ, ಹಾಸನ, ತುಮಕೂರು, ಕಲಬುರ್ಗಿ, ಬೆಳಗಾವಿಯಲ್ಲಿ ತಲಾ ಒಬ್ಬರು ನಿಧನರಾಗಿದ್ದಾರೆ.ಇದರಿಂದಾಗಿ ಕೋವಿಡ್‌ನಿಂದ ಸಾವಿಗೀಡಾದವರ ಸಂಖ್ಯೆ 272ಕ್ಕೆ ತಲುಪಿದೆ. ರಾಜ್ಯದಲ್ಲಿ ಕೇವಲ 48 ಗಂಟೆಗಳಲ್ಲಿ 2,774 ಮಂದಿ ಕೊರೊನಾ ಸೋಂಕಿತರಾಗಿ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.

ಗುರುವಾರ ಒಂದೇ ದಿನ 16,210 ಮಂದಿಯ ಗಂಟಲ ದ್ರವದ ಮಾದರಿಯನ್ನು ಪರೀಕ್ಷೆ ಮಾಡಲಾಗಿದೆ. ಬಳ್ಳಾರಿಯಲ್ಲಿ 62 ಸೇರಿದಂತೆ 271 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಬೆಂಗಳೂರಿನಲ್ಲಿ ಕೋವಿಡ್ ಪೀಡಿತರ ಸಂಖ್ಯೆ ಹೆಚ್ಚುತ್ತಿದ್ದು, ಹೊಸ
ದಾಗಿ 889 ಪ್ರಕರಣಗಳು ವರದಿಯಾಗಿವೆ. ಈ ಪ್ರಕರಣಗಳಲ್ಲಿ ಸೋಂಕಿತರ ಸಂಪರ್ಕವೇ ಪತ್ತೆಯಾಗಿಲ್ಲ.

29 ಜಿಲ್ಲೆಗಳಲ್ಲಿ ಪ್ರಕರಣ: ಚಾಮರಾಜನಗರ ಬಿಟ್ಟು ಉಳಿದ ಜಿಲ್ಲೆಗಳಲ್ಲಿಯೂ ಹೊಸ ಪ್ರಕರಣಗಳು ವರದಿಯಾಗಿವೆ. ದಕ್ಷಿಣ ಕನ್ನಡದಲ್ಲಿ 90, ಮೈಸೂರು 68, ಬಳ್ಳಾರಿ 65, ಧಾರವಾಡ 47, ವಿಜಯಪುರ 39, ರಾಮನಗರ 39, ಕಲಬುರ್ಗಿ 38, ಬೀದರ್ 32, ತುಮಕೂರು 26, ಶಿವಮೊಗ್ಗ 23, ಮಂಡ್ಯ19, ಉತ್ತರ ಕನ್ನಡ 17, ಹಾಸನ 15, ಉಡುಪಿ 14, ಕೋಲಾರ 12, ರಾಯಚೂರು 11, ಬಾಗಲಕೋಟೆ 10, ದಾವಣಗೆರೆ 8, ಯಾದಗಿರಿ 7, ಬೆಳಗಾವಿ 7, ಕೊಡಗು 6, ಬೆಂಗಳೂರು(ಗ್ರಾ.)5, ಹಾವೇರಿ 4, ಕೊಪ್ಪಳ 4, ಚಿತ್ರದುರ್ಗ 3, ಗದಗ 2 ಹಾಗೂ ಚಿಕ್ಕಬಳ್ಳಾಪುರ, ಚಿಕ್ಕಮಗಳೂರಿನಲ್ಲಿ ತಲಾ ಒಂದು ಪ್ರಕರಣ ವರದಿಯಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.