ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2 ಖಾಸಗಿ ಲ್ಯಾಬ್‌ಗಳಲ್ಲಿ ಪರೀಕ್ಷೆ: ಕೇಂದ್ರ ಆರೋಗ್ಯ ಸಚಿವಾಲಯ ಅನುಮತಿ

Last Updated 1 ಏಪ್ರಿಲ್ 2020, 20:50 IST
ಅಕ್ಷರ ಗಾತ್ರ

ಬೆಂಗಳೂರು:ಕೊರೊನಾ ಸೋಂಕು ಪರೀಕ್ಷೆಗೆ ಕಾರ್ಯಕ್ಕೆ ಇನ್ನಷ್ಟು ವೇಗ ನೀಡುವ ಉದ್ದೇಶದಿಂದ ರಾಜ್ಯದ ಎರಡು ಖಾಸಗಿಪ್ರಯೋಗಾಲಯಗಳಿಗೆ ಕೋವಿಡ್–19 ಪರೀಕ್ಷೆಗಳನ್ನು ನಡೆಸಲು ಕೇಂದ್ರ ಆರೋಗ್ಯ ಸಚಿವಾಲಯ ಅನುಮತಿ ನೀಡಿದೆ.

ಸೋಂಕು ಶಂಕೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಅಧಿಕವಾಗುತ್ತಿದೆ. ರಾಜ್ಯದ ವಿವಿಧೆಡೆ ಜಿಲ್ಲಾ ಮಟ್ಟದಲ್ಲಿ ಸರ್ಕಾರಿ ಪ್ರಯೋಗಾಲಯಗಳು ಪ್ರಾರಂಭವಾದರೂ ಕೆಲವರು ವರದಿಗೆ ಕಾಯಬೇಕಾದ ಸ್ಥಿತಿಯಿದೆ. ಹಾಗಾಗಿ ಖಾಸಗಿ ಪ್ರಯೋಗಾಲಯಗಳಿಗೂ
ಅನುಮತಿ ನೀಡಿ, ದರ ನಿಗದಿ ಮಾಡಲಾಗಿದೆ.

ಬೆಂಗಳೂರಿನ ಶಿವಾಜಿನಗರದಲ್ಲಿರುವ ನ್ಯೂಬರ್ಗ್ ಆನಂದ್ ಡಯೊಗ್ನಾಸ್ಟಿಕ್ ಲ್ಯಾಬೋರೇಟರಿ ಹಾಗೂ ಬಸವನಗುಡಿಯಲ್ಲಿರುವ ಕ್ಯಾನ್ಸೈಟ್ಟೆಕ್ನಾಲಜೀಸ್ಪ್ರೈ.ಲಿ.ನಲ್ಲಿ ಕೋವಿಡ್‌ ಪರೀಕ್ಷೆಗಳನ್ನು ಮಾಡಲಾಗುತ್ತದೆ. ಈ ಪ್ರಯೋಗಾಲಯಗಳಿಗೆಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯು (ಐಸಿಎಂಆರ್) ಪರವಾನಗಿ ನೀಡಿದೆ ಎಂದು ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಸುತ್ತೋಲೆ ಹೊರಡಿಸಿದ್ದಾರೆ.

ದರ ನಿಗದಿ: ರಾಷ್ಟ್ರೀಯ ಕೋವಿಡ್–19 ಕಾರ್ಯಪಡೆ ಶಿಫಾರಸ್ಸಿನ ಅನುಸಾರ ಖಾಸಗಿ ಪ್ರಯೋಗಾಲಯಗಳಿಗೆ ಕೋವಿಡ್–19 ಮಾದರಿ ಪರೀಕ್ಷೆಗೆ ಗರಿಷ್ಠ ₹4,500 ನಿಗದಿಪಡಿಸಲಾಗಿದೆ. ಇದರಲ್ಲಿ ಶಂಕಿತ ಪ್ರಕರಣಗಳ ತಪಾಸಣೆ ಪರೀಕ್ಷೆಗೆ ₹1,500 ಮತ್ತು ದೃಢಪಡಿಸುವಿಕೆ ಪರೀಕ್ಷೆಗೆ ₹3 ಸಾವಿರ ಅಂತಿಮಗೊಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT