ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಔಷಧಗಳಿಂದ ಹೃದಯಾಘಾತ ಅತ್ಯಲ್ಪ: ಡಾ.ಸಿ.ಎನ್‌.ಮಂಜುನಾಥ್‌

Last Updated 22 ಮೇ 2021, 19:46 IST
ಅಕ್ಷರ ಗಾತ್ರ

ಬೆಂಗಳೂರು: ‘ಕೋವಿಡ್‌ನಿಂದ ಚೇತರಿಸಿಕೊಂಡವರ ಪೈಕಿ ಶೇ5 ರಿಂದ 6ರಷ್ಟು ಮಂದಿಗೆ ಮಾತ್ರ ಹೃದಯಾಘಾತವಾಗುತ್ತದೆ. ಇದಕ್ಕೆ ಕೋವಿಡ್‌ಗೆ ನೀಡುವ ಔಷಧ ಕಾರಣವಲ್ಲ’ಎಂದು ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್‌.ಮಂಜುನಾಥ್‌ ಹೇಳಿದರು.

‘ರೋಗದಿಂದ ಚೇತರಿಸಿಕೊಂಡ ನಂತರ ಮತ್ತಷ್ಟು ಮುನ್ನೆಚ್ಚರಿಕೆ ವಹಿಸಬೇಕು. ಅಗತ್ಯ ಪರೀಕ್ಷೆ ಮಾಡಿಸಿಕೊಂಡು ವೈದ್ಯರು ಸೂಚಿಸಿದ ಔಷಧಗಳನ್ನು ನಿಯಮಿತವಾಗಿ ಸೇವಿಸಬೇಕು’ ಎಂದರು.

‘ಕೋವಿಡ್‌ ಎರಡನೇ ಅಲೆ ಹತೋಟಿಗೆ ಬರುತ್ತಿದೆ. ಆಸ್ಪತ್ರೆಗಳಿಗೆ ದಾಖಲಾಗುವವರ ಸಂಖ್ಯೆ ಇಳಿಮುಖವಾಗಿದೆ. ಅನೇಕರು ಬೆಂಗಳೂರು ತೊರೆದು ಹಳ್ಳಿಗಳಿಗೆ ಹೋಗಿದ್ದರಿಂದ ಅಲ್ಲಿ ಸೋಂಕು ಪ್ರಕರಣಗಳು ಹೆಚ್ಚಿವೆ. ಅಲ್ಲೂ ಅಗತ್ಯ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂದು ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ.ಎಂ.ಕೆ.ಸುದರ್ಶನ್‌ ತಿಳಿಸಿದರು.

ಡಾ.ಗಿರಿಧರ್‌ ಬಾಬು ‘ಜನರ ನಿರ್ಲಕ್ಷ್ಯದಿಂದಾಗಿ ಕೋವಿಡ್ ವೈರಾಣು ಹರಡುತ್ತಿದೆ. ಜನ ತಮ್ಮ ವರ್ತನೆಯಲ್ಲಿ ಬದಲಾವಣೆ ತಂದುಕೊಳ್ಳಬೇಕು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT