ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್-19 | ಮೆಜೆಸ್ಟಿಕ್‌ನಲ್ಲಿ ಸೋಂಕು ನಿವಾರಕ ಸಿಂಪರಣೆ

Last Updated 19 ಜುಲೈ 2020, 17:39 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಸಾರ್ವಜನಿಕ ಪ್ರದೇಶಗಳು, ಕೋವಿಡ್ ಆಸ್ಪತ್ರೆಗಳ ಬಳಿ ಸೋಂಕು ನಿವಾರಕ ಸಿಂಪರಣೆ ಕಾರ್ಯವನ್ನು ಅಗ್ನಿಶಾಮಕ ಸಿಬ್ಬಂದಿ ಭಾನುವಾರ ಆರಂಭಿಸಿದರು.

ಕೆಂಪೇಗೌಡ ಬಸ್ ನಿಲ್ದಾಣದ ಆವರಣದಲ್ಲಿ ಸ್ಯಾನಿಟೈಸೇಷನ್ ಕಾರ್ಯಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ನಗರದಲ್ಲಿ 40 ಪ್ರಮುಖ ಸ್ಥಳಗಳಲ್ಲಿ ಸೋಂಕು ನಿವಾರಕ ಸಿಂಪಡಣೆ ಮಾಡಿ ಸ್ವಚ್ಛಗೊಳಿಸಲಾಗುವುದು’ ಎಂದು ಹೇಳಿದರು.

‘ಎಲ್ಲಾ ಕೋವಿಡ್ ಆಸ್ಪತ್ರೆಗಳು, ಜ್ವರ ಚಿಕಿತ್ಸಾಲಯಗಳು (ಫೀವರ್ ಕ್ಲಿನಿಕ್‌ಗಳು), ಕೋವಿಡ್ ಆರೈಕೆ ಕೇಂದ್ರಗಳು, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಮಾರುಕಟ್ಟೆಗಳಲ್ಲಿ ಸ್ಯಾನಿಟೈಸೇಷನ್ ಮಾಡಲಾಗುವುದು. ಇದಕ್ಕಾಗಿ 50 ಅಗ್ನಿಶಾಮಕ ವಾಹನಗಳನ್ನು ಬಳಸಲಾಗುತ್ತಿದೆ’ ಎಂದು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT