ಗುರುವಾರ , ಆಗಸ್ಟ್ 6, 2020
24 °C

ಏಳು ತಿಂಗಳ ಮಗುವಿನೊಂದಿಗೆ ಅಲೆದಾಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೊರೊನಾ ಸೋಂಕಿತ 7 ತಿಂಗಳ ಮಗುವಿನೊಂದಿಗೆ ತಾಯಿಯೊಬ್ಬರು ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡಿದರು.

36 ವರ್ಷದ ಪತಿಗೆ ಇತ್ತೀಚಿಗೆ ಸೋಂಕು ದೃಢಪಟ್ಟಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಪತ್ನಿ ಹೋಮ್ ಕ್ವಾರಂಟೈನ್‌ನಲ್ಲಿ ಇದ್ದರು. ತಾಯಿ ಮತ್ತು ಮಗುವಿಗೆ ಕೊರೊನಾ ಸೋಂಕು ಪರೀಕ್ಷೆ ನಡೆಸಲಾಗಿತ್ತು. ಬುಧವಾರ ರಾತ್ರಿ ಕರೆ ಮಾಡಿದ ಬಿಬಿಎಂಪಿ ಸಿಬ್ಬಂದಿ ಸೋಂಕು ದೃಢಪಟ್ಟಿರುವ ಬಗ್ಗೆ ಮಾಹಿತಿ ನೀಡಿದ್ದರು.

ಗುರುವಾರ ಟೆಂಪೊಟ್ರಾವೆಲರ್ ವಾಹನ ಬಂತಾದರೂ, ಆಸ್ಪತ್ರೆಗಳಲ್ಲಿ ಜಾಗ ಸಿಗದೆ ಪರದಾಡಿದರು. ಬಿಜಿಎಸ್ ಆಸ್ಪತ್ರೆಯಲ್ಲಿ ವೈದ್ಯರಿಗಾಗಿ 3 ಗಂಟೆ ಕಾಲ ಕಾದರು. ನಂತರವೂ ಆಸ್ಪತ್ರೆಯಲ್ಲಿ ಅವಕಾಶ ಸಿಗಲಿಲ್ಲ. ಹಲವು ಖಾಸಗಿ ಆಸ್ಪತ್ರೆಗಳಿಗೆ ಸುತ್ತಾಡಿ, ಸ್ಥಳೀಯ ಜನಪ್ರತಿನಿಗಳ ಸಹಾಯದಿಂದ ಸಂಜೆ ವೇಳೆಗೆ ಕೆ.ಸಿ.ಜನರಲ್ ಆಸ್ಪತ್ರೆಗೆ ಮಗು ದಾಖಲಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು