ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ರಿಟನ್ ಪ್ರಯಾಣಿಕರು: 80 ಮಂದಿ ಪರೀಕ್ಷಾ ವರದಿ ಬಾಕಿ

Last Updated 1 ಜನವರಿ 2021, 21:18 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯಕ್ಕೆ ಬ್ರಿಟನ್‌ನಿಂದ ಬಂದವರಲ್ಲಿ ಈವರೆಗೆ 2,106 ಮಂದಿ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದಾರೆ. ಅವರಲ್ಲಿ ಶುಕ್ರವಾರ ಪರೀಕ್ಷೆ ಮಾಡಿಸಿಕೊಂಡ 77 ಮಂದಿ ಸೇರಿದಂತೆ ಒಟ್ಟು 80 ಮಂದಿ ವರದಿಗಾಗಿ ಎದುರು ನೋಡುತ್ತಿದ್ದಾರೆ.

ಪರೀಕ್ಷೆಗೆ ಒಳಪಟ್ಟ ಬ್ರಿಟನ್ ಪ್ರಯಾಣಿಕರಲ್ಲಿ 1,993 ಮಂದಿ ಸೋಂಕಿತರಾಗಿಲ್ಲ ಎಂಬುದು ದೃಢಪಟ್ಟಿದೆ. ಈವರೆಗೆ 33 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ರಾಜ್ಯಕ್ಕೆ ನ.25ರ ಬಳಿಕ 5,068 ಮಂದಿ ಬ್ರಿಟನ್‌ನಿಂದ ಬಂದಿದ್ದು, ಅವರನ್ನು ಆರೋಗ್ಯ ಸಿಬ್ಬಂದಿ ಪತ್ತೆ ಮಾಡುತ್ತಿದ್ದಾರೆ.

ರಾಜ್ಯದಲ್ಲಿ ಹೊಸದಾಗಿ 877 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಇಲ್ಲಿಯವರೆಗೆ ಸೋಂಕಿಗೀಡಾದವರ ಒಟ್ಟು ಸಂಖ್ಯೆ 9.20 ಲಕ್ಷ ದಾಟಿದೆ. ಸೋಂಕಿತರಲ್ಲಿ 6 ಮಂದಿ ಮೃತಪಟ್ಟಿದ್ದಾರೆ. ಈವರೆಗೆ ಸಾವಿಗೀಡಾದವರ ಸಂಖ್ಯೆ 12,096ಕ್ಕೆ ತಲುಪಿದೆ. ಒಂದೇ ದಿನ 1.08 ಲಕ್ಷ ಆರ್‌ಟಿ–ಪಿಸಿಆರ್ ಸೇರಿದಂತೆ 1.17 ಲಕ್ಷ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. ಈವರೆಗೆ 1.41 ಕೋಟಿ ಮಂದಿ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದಾರೆ. ಕೋವಿಡ್ ಪೀಡಿತರಲ್ಲಿ ಮತ್ತೆ 1,084 ಮಂದಿ ಗುಣಮುಖರಾಗಿದ್ದು, ಇದರಿಂದಾಗಿ ಚೇತರಿಸಿಕೊಂಡವರ ಸಂಖ್ಯೆ 8.97 ಲಕ್ಷಕ್ಕೆ ತಲುಪಿದೆ.

ಸೋಂಕಿತರಲ್ಲಿ ಸದ್ಯ 11,058 ಮಂದಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಅವರಲ್ಲಿ 189 ಮಂದಿ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಇದ್ದಾರೆ. ಕಳೆದ 14 ದಿನಗಳ ಅವಧಿಯಲ್ಲಿ 67 ಸಾವಿರ ನೇರ ಸಂಪರ್ಕಿತರು ಹಾಗೂ 77 ಸಾವಿರ ಪರೋಕ್ಷ ಸಂಪರ್ಕಿತರನ್ನು ಪತ್ತೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಮತ್ತೆ 464 ಮಂದಿ ಕೋವಿಡ್ ಪೀಡಿತರಾಗಿದ್ದು, ಸೋಂಕಿತರ ಸಂಖ್ಯೆ 3.88 ಲಕ್ಷ ದಾಟಿದೆ. ಮೈಸೂರಿನಲ್ಲಿ ಮತ್ತೆ 26 ಪ್ರಕರಣಗಳು ವರದಿಯಾಗಿದೆ. ಅಲ್ಲಿ ಸೋಂಕಿತರ ಸಂಖ್ಯೆ 52,420ಕ್ಕೆ ತಲುಪಿದೆ. ಚಿತ್ರದುರ್ಗದಲ್ಲಿ 39, ತುಮಕೂರಿನಲ್ಲಿ 32, ಚಿಕ್ಕಬಳ್ಳಾಪುರದಲ್ಲಿ 29, ಬೆಂಗಳೂರು ಗ್ರಾಮಾಂತರದಲ್ಲಿ 28, ದಕ್ಷಿಣ ಕನ್ನಡದಲ್ಲಿ 27 ಪ್ರಕರಣಗಳು ವರದಿಯಾಗಿವೆ. ರಾಜ್ಯದ 27 ಜಿಲ್ಲೆಯಲ್ಲಿ ಹೊಸದಾಗಿ ಯಾವುದೇ ಮರಣ ಪ್ರಕರಣ ವರದಿಯಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT