ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ವಾರದಲ್ಲಿ 2,623 ಕೋವಿಡ್ ಪ್ರಕರಣ ದೃಢ

Last Updated 12 ಜೂನ್ 2022, 15:59 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ಒಂದು ವಾರದಲ್ಲಿ 2,623 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 3,496ಕ್ಕೆ ಏರಿಕೆಯಾಗಿದೆ.

ದೈನಂದಿನ ಸೋಂಕಿತರ ಸಂಖ್ಯೆ ಏಪ್ರಿಲ್, ಮೇ ತಿಂಗಳಲ್ಲಿ 50ರ ಆಸುಪಾಸಿನಲ್ಲಿತ್ತು. ಈ ತಿಂಗಳು ಹೊಸ ಪ್ರಕರಣಗಳ ಸಂಖ್ಯೆ ಮತ್ತೆ ಏರುಗತಿ ಪಡೆದಿದೆ. ಒಂದು ವಾರದಲ್ಲಿ 1,455 ಮಂದಿ ಚೇತರಿಸಿಕೊಂಡಿದ್ದಾರೆ. ಮರಣ ಪ್ರಕರಣ ಹೊಸದಾಗಿ ವರದಿಯಾಗಿಲ್ಲ.

ಸೋಂಕು ದೃಢಪ್ರಮಾಣ ಶೇ 2.15ರಷ್ಟು ವರದಿಯಾಗಿದೆ. ಕೋವಿಡ್ಪೀಡಿತರ ಸಂಖ್ಯೆ 17.91 ಲಕ್ಷ ದಾಟಿದೆ. ಅವರಲ್ಲಿ 17.71 ಲಕ್ಷಕ್ಕೂ ಅಧಿಕ ಮಂದಿ ಚೇತರಿಸಿಕೊಂಡಿದ್ದಾರೆ.

11 ಜಿಲ್ಲೆಗಳಲ್ಲಿ ಪ್ರಕರಣ:ರಾಜ್ಯದಲ್ಲಿ ಭಾನುವಾರ 11 ಜಿಲ್ಲೆಗಳಲ್ಲಿ ಪ್ರಕರಣಗಳು ಪತ್ತೆಯಾಗಿದ್ದು, 463 ಮಂದಿ ಸೋಂಕಿತರಾಗಿರುವುದು ದೃಢಪಟ್ಟಿದೆ. 429 ಪ್ರಕರಣಗಳು ಬೆಂಗಳೂರಿನಲ್ಲಿಯೇ ವರದಿಯಾಗಿವೆ.‌‌

ರಾಜ್ಯದಲ್ಲಿ ಒಂದು ದಿನದಲ್ಲಿ 21,519 ಮಂದಿಗೆಕೋವಿಡ್ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ ಈವರೆಗೆಕೋವಿಡ್ಪೀಡಿತರ ಸಂಖ್ಯೆ 39.56 ಲಕ್ಷ ದಾಟಿದೆ. 39.12 ಲಕ್ಷಕ್ಕೂ ಹೆಚ್ಚು ಮಂದಿ ಚೇತರಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT