ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದೇಶಕ್ಕೆ ಪ್ರಯಾಣ: ನಾಳೆಯಿಂದ ಲಸಿಕೆ; 28 ದಿನ ಕಳೆದ ಬಳಿಕ 2ನೇ‌ ಡೋಸ್

Last Updated 20 ಜೂನ್ 2021, 18:45 IST
ಅಕ್ಷರ ಗಾತ್ರ

ಬೆಂಗಳೂರು: ‘ಉದ್ಯೋಗ ಅಥವಾ ವ್ಯಾಸಂಗ ಉದ್ದೇಶದಿಂದ ವಿದೇಶಕ್ಕೆ ತೆರಳುವವರಿಗೆ ಬೆಂಗಳೂರು ನಗರ ವಿಶ್ವವಿದ್ಯಾಲಯದ ಸೆಂಟ್ರಲ್‌ ಕಾಲೇಜು ಆವರಣದಲ್ಲಿ ಮಂಗಳವಾರದಿಂದ (ಜೂನ್‌ 22) ಕೋವಿಡ್ ಲಸಿಕೆ ಹಾಕಲಾಗುವುದು’ ಎಂದು ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರೂ ಆಗಿರುಪ ಮುಖ್ಯಮಂತ್ರಿ ಡಾ.ಸಿ.ಎನ್.‌ ಅಶ್ವತ್ಥನಾರಾಯಣ ತಿಳಿಸಿದರು.

ಟೋಕಿಯೊದಲ್ಲಿ ನಡೆಯುವ ಒಲಿಂಪಿಕ್‌ ಕ್ರೀಡಾಕೂಟಕ್ಕೆ ತೆರಳುವ ಕ್ರೀಡಾಪಟುಗಳೂ ಇಲ್ಲಿ ಲಸಿಕೆ ಪಡೆಯಬಹುದು. ಬೆಳಿಗ್ಗೆ 10.30 ಗಂಟೆಯಿಂದ ಲಸಿಕೆ ನೀಡಲಾಗುವುದು. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ 28 ದಿನಗಳಲ್ಲೇ ಈ ವರ್ಗದವರಿಗೆ ಎರಡನೇ ಡೋಸ್‌ ನೀಡಲಾಗುವುದು’ ಎಂದರು.

ಪಾಲಿಕೆಯ ಎಂಟು ವಲಯಗಳ ಆಯುಕ್ತರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಪೂರ್ವ ವಲಯದ ಆರೋಗ್ಯಾಧಿಕಾರಿಗೆ ಜವಾಬ್ದಾರಿ ನೀಡಲಾಗಿದೆ. ಲಸಿಕೆ ಕೇಂದ್ರಕ್ಕೆ ಬರುವ ಅರ್ಹ ಲಸಿಕಾಂಕ್ಷಿಗಳ ಸ್ವಯಂ ಘೋಷಣಾ ಪತ್ರ ಸೇರಿ ಇತರೆ ದಾಖಲೆಗಳನ್ನು ಪರಿಶೀಲಿಸಬೇಕು. ಲಸಿಕೆ ಪಡೆದ ದೃಢೀಕರಣ ಪತ್ರವನ್ನು ತಕ್ಷಣ ಆನ್‌ಲೈನ್‌ನಲ್ಲಿ ಅಪ್‌ಲೋಡ್‌ ಮಾಡಿಸಬೇಕು. ಈಗಾಗಲೇ ಮೊದಲ ಡೋಸ್‌ ಪಡೆದಿರುವವರು ತಮ್ಮ ಪಾಸ್‌ಪೋರ್ಟ್‌ ಸಂಖ್ಯೆಯನ್ನು ದಾಖಲು ಮಾಡಿರದಿದ್ದರೆ ಎರಡನೇ ಡೋಸ್‌ ಪಡೆಯಲು ಬರುವಾಗ ಕಡ್ಡಾಯವಾಗಿ ದಾಖಲಿಸಿಕೊಳ್ಳಬೇಕು’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT