ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19: ರಾಜ್ಯದಲ್ಲಿ 296 ಹೊಸ ಕೋವಿಡ್‌ ಪ್ರಕರಣಗಳು ಪತ್ತೆ

Published 1 ಜನವರಿ 2024, 16:30 IST
Last Updated 1 ಜನವರಿ 2024, 16:30 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಸೋಮವಾರ 296 ಕೋವಿಡ್ ಪ್ರಕರಣಗಳು ಹೊಸದಾಗಿ ದೃಢಪಟ್ಟಿವೆ. ಒಬ್ಬರು ಮೃತಪಟ್ಟಿದ್ದಾರೆ.

24 ಗಂಟೆಗಳ ಅವಧಿಯಲ್ಲಿ 5,021 ಪರೀಕ್ಷೆಗಳನ್ನು ನಡೆಸಲಾಗಿದೆ. ಶೇ 5.89ರಷ್ಟು ಮಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. 1,245 ಸಕ್ರಿಯ ಪ್ರಕರಣಗಳಲ್ಲಿ 1,179 ಮಂದಿ ಮನೆ ಆರೈಕೆಗೆ ಒಳಗಾಗಿದ್ದಾರೆ. 66 ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, ಅದರಲ್ಲಿ 20 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕಿತರಲ್ಲಿ 50 ಮಂದಿ ಚೇತರಿಸಿಕೊಂಡಿದ್ದಾರೆ.

ಡಿ.15 ರಿಂದ ಈವರೆಗೆ ರಾಜ್ಯದಲ್ಲಿ 601 ಮಾದರಿಗಳನ್ನು ವೈರಾಣುವಿನ ವಂಶವಾಹಿ ಸಂರಚನಾ ವಿಶ್ಲೇಷಣೆ (ಜಿನೋಮಿಕ್ ಸಿಕ್ವೆನ್ಸೀಸ್‌) ಪರೀಕ್ಷೆಗೆ ಕಳುಹಿಸಲಾಗಿದೆ. ಅವುಗಳಲ್ಲಿ ಈವರೆಗೆ 262 ಮಾದರಿಗಳ ಫಲಿತಾಂಶ ಬಂದಿದೆ. ಇವುಗಳಲ್ಲಿ 199 ಮಾದರಿಗಳಲ್ಲಿ ಜೆಎನ್‌.1, 28 ಮಾದರಿಗಳಲ್ಲಿ ಎಕ್ಸ್‌ಬಿಬಿ ಹಾಗೂ 35 ಮಾದರಿಗಳಲ್ಲಿ ಕೊರೊನಾ ವೈರಾಣುವಿನ ಇತರ ರೂಪಾಂತರಿ ತಳಿಗಳು ಪತ್ತೆಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT