ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶು ವೈದ್ಯ ಕಾಲೇಜಿನಲ್ಲಿ ಕೋವಿಡ್‌ ಆರೈಕೆ ಕೇಂದ್ರ

Last Updated 22 ಏಪ್ರಿಲ್ 2021, 22:38 IST
ಅಕ್ಷರ ಗಾತ್ರ

ಬೆಂಗಳೂರು: ಹೆಬ್ಬಾಳದ ಪಶುವೈದ್ಯ ಕಾಲೇಜಿನ ಆವರಣದಲ್ಲಿ 60 ಹಾಸಿಗೆ ಸಾಮರ್ಥ್ಯದ ಕೋವಿಡ್ ಆರೈಕೆ ಕೇಂದ್ರ ಆರಂಭವಾಗಿದ್ದು, ಕೇಂದ್ರವನ್ನು ಶಾಸಕ ಬೈರತಿ ಸುರೇಶ್‌ ಗುರುವಾರ ಉದ್ಘಾಟಿಸಿದರು. ‘ರಾಜ್ಯದಾದ್ಯಂತ ಆಸ್ಪತ್ರೆಗಳಲ್ಲಿ ಬೆಡ್ ಹಾಗೂ ಆಕ್ಸಿಜನ್ ಇಲ್ಲದೇ ಪರದಾಡುವಂತ ಸ್ಥಿತಿ ಉಂಟಾಗಿದ್ದು, ಇದನ್ನು ದೃಷ್ಟಿಯಲ್ಲಿಟ್ಟು ಕೊಂಡು ಇಲ್ಲಿ ಕೇಂದ್ರ ಆರಂಭಿಸಲಾಗಿದೆ‘ ಎಂದು ಸುರೇಶ್‌ ಹೇಳಿದರು.

‘ಕೋವಿಡ್ ಆರೈಕೆ ಕೇಂದ್ರ ಆರಂಭದಿಂದ ಆಸ್ಪತ್ರೆಗಳ ಮೇಲಿನ ಒತ್ತಡ ಕಡಿಮೆ ಆಗಲಿದೆ. ರೋಗ ಲಕ್ಷಣ ಇಲ್ಲದ ಸೋಂಕಿತರು ಮನೆಯಲ್ಲಿ ಪ್ರತ್ಯೇಕವಾಗಿ ಆರೈಕೆಗೆ ಒಳಗಾಗಲು ಸೌಲಭ್ಯವಿಲ್ಲದಿದ್ದರೆ ಕೋವಿಡ್‌ ಆರೈಕೆ ಕೇಂದ್ರದಲ್ಲಿ ಚಿಕಿತ್ಸೆ ಪಡೆಯಬಹುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT