ಭಾನುವಾರ, ಮೇ 29, 2022
30 °C

ಬೆಂಗಳೂರು: ಕೋವಿಡ್ ಆರೈಕೆ ಕೇಂದ್ರ ಪುನರಾರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ನಗರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವುದರಿಂದ ಬಿಬಿಎಂಪಿ ಸಹಯೋಗದಲ್ಲಿ ಪ್ರಣವ್ ಫೌಂಡೇಷನ್ ಬೊಮ್ಮನಹಳ್ಳಿಯ ಆರ್‌ಎಂಆರ್ ಪಾರ್ಕ್‌ನಲ್ಲಿ ಕೋವಿಡ್ ಆರೈಕೆ ಕೇಂದ್ರ ಪುನರಾರಂಭಿಸಿದೆ.

ಈ ಕೇಂದ್ರದಲ್ಲಿ ವೈದ್ಯಕೀಯ ಆಮ್ಲಜನಕ ಸಂಪರ್ಕ ಹೊಂದಿರುವ 50 ಹಾಸಿಗೆಗಳನ್ನು ಅಳವಡಿಸಲಾಗಿದೆ. ಬಿಬಿಎಂಪಿ ವತಿಯಿಂದ 3 ಪರಿಣತ ವೈದ್ಯರು ಹಾಗೂ 9 ಶುಶ್ರೂಷಕರನ್ನು ನಿಯೋಜಿಸಲಾಗಿದೆ.

‘ಕೋವಿಡ್ ಎರಡನೇ ಅಲೆಯಲ್ಲಿ ಹಾಸಿಗೆಗಳ ಅಭಾವ ಸೃಷ್ಟಿಯಾದಾಗ 15 ದಿನಗಳಲ್ಲಿ ಕೇಂದ್ರ ನಿರ್ಮಿಸಿ, ರೋಗಿಗಳನ್ನು ದಾಖಲಿಸಿಕೊಳ್ಳಲಾಗಿತ್ತು. ಸೋಂಕಿತರ ಸಂಖ್ಯೆ ಇಳಿಕೆಯಾದ ಬಳಿಕ ಈ ಕೇಂದ್ರವನ್ನು ಲಸಿಕೆ ವಿತರಣೆ ಹಾಗೂ ಆರೋಗ್ಯ ತಪಾಸಣೆಗೆ ಉಪಯೋಗಿಸಿಕೊಳ್ಳಲಾಯಿತು. ಈಗ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿರುವುದರಿಂದ ಕೇಂದ್ರವನ್ನು ಕೋವಿಡ್ ಆರೈಕೆ ಕೇಂದ್ರವಾಗಿ ಪರಿವರ್ತಿಸಲಾಗಿದೆ’ ಎಂದು ಪ್ರಣವ್ ಫೌಂಡೇಷನ್ ಪ್ರಕಟಣೆಯಲ್ಲಿ ತಿಳಿಸಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು