ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹದೇವಪುರ ವಲಯ: ಕೋವಿಡ್‌ ಕಮಾಂಡ್‌ ಕೇಂದ್ರ

Last Updated 16 ಜುಲೈ 2020, 21:55 IST
ಅಕ್ಷರ ಗಾತ್ರ

ಬೆಂಗಳೂರು: ಕೊರೊನಾ ಸೋಂಕು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಮಹದೇವಪುರ ವಲಯದಲ್ಲಿ ಎ.ನಾರಾಯಣಪುರದಲ್ಲಿ ರೈಲ್ವೆ ನಿಲ್ದಾಣದ ಬಳಿಯ ಲೌರಿ ಮೆಮೊರಿಯಲ್‌ ಕಾಲೇಜಿನಲ್ಲಿ ಕೋವಿಡ್‌ ಕಮಾಂಡ್‌ ಕೇಂದ್ರವನ್ನು ಆರಂಭಿಸಲಾಗಿದೆ.

ವಲಯದ ಜಂಟಿ ಆಯುಕ್ತರಾದ ಆರ್‌.ವೆಂಕಟಾಚಲಪತಿ ಅವರು ಕಮಾಂಡ್‌ ಕೇಂದ್ರದ ಮುಖ್ಯಸ್ಥರಾಗಿರುತ್ತಾರೆ. ಮುಖ್ಯ ಎಂಜಿನಿಯರ್‌ ಪರಮೇಶ್ವರಯ್ಯ ಅವರನ್ನು ನೋಡಲ್‌ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.

ರೋಗಿಗಳಿಗೆ ಆಂಬುಲೆನ್ಸ್‌ ಮತ್ತು ಆಸ್ಪತ್ರೆಗಳಲ್ಲಿ ಹಾಸಿಗೆ ಒದಗಿಸುವುದಕ್ಕೆ, ಗೃಹ ದಿಗ್ಬಂಧನದ (ಹೋಂ ಕ್ವಾರಂಟೈನ್‌) ಪರಿಣಾಮಕಾರಿ ಜಾರಿಗೆ, ಸೊಂಕಿತರ ಸಂಪರ್ಕ ಪತ್ತೆ ಹಚ್ಚುವುದಕ್ಕೆ, ಕಂಟೈನ್‌ಮೆಂಟ್‌ ಪ್ರದೇಶಗಳನ್ನು ನಿರ್ವಹಿಸುವುದಕ್ಕೆ, ಕಂಟೈನ್‌ಮೆಂಟ್‌ ಪ್ರದೇಶಗಳಲ್ಲಿ ಸೋಂಕು ನಿವಾರಕ ಸಿಂಪಡಣೆ ಮತ್ತು ಕಸ ವಿಲೇವಾರಿಗೆ, ಕೋವಿಡ್‌ ಆರೈಕೆ ಕೇಂದ್ರಗಳ ನಿರ್ವಹಣೆಗೆ ಹಾಗೂ ಜ್ವರ ಚಿಕಿತ್ಸಾಲಯಗಳ ನಿರ್ವಹಣೆಗೆ ಪ್ರತ್ಯೇಕ ತಂಡಗಳನ್ನು ರಚಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಕಮಾಂಡ್ ಕೇಂದ್ರದ ಸಹಾಯವಾಣಿ: 080–23010101/02

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT