ಗುರುವಾರ , ಮೇ 13, 2021
18 °C

ರಾತ್ರಿ ಕರ್ಫ್ಯೂ: ಕೈಗಾರಿಕಾ ನೌಕರರಿಗೆ ಗುರುತಿನ ಚೀಟಿ ಕಡ್ಡಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾತ್ರಿ ಕರ್ಫ್ಯೂ ವಿಧಿಸಿರುವ ಏಳು ಜಿಲ್ಲೆಗಳ ನಗರಗಳು ಮತ್ತು ಮಣಿಪಾಲದ ಕೈಗಾರಿಕೆಗಳ ನೌಕರರು ಕರ್ಫ್ಯೂ ಅವಧಿಯಲ್ಲಿ (ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆ) ಓಡಾಡುವ ಸಂದರ್ಭದಲ್ಲಿ ತಮ್ಮ ಕಂಪನಿ ನೀಡಿದ ಗುರುತಿನ ಚೀಟಿ ಹೊಂದಿರಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕೈಗಾರಿಕೆಗಳ ಸುಗಮ ಕಾರ್ಯನಿರ್ವಹಣೆ ಮತ್ತು ನೌಕರರ ಓಡಾಟಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶ
ದಿಂದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌ ಈ ಆದೇಶ ಹೊರಡಿಸಿದ್ದಾರೆ.

ನೌಕರರನ್ನು ಕರೆದೊಯ್ಯುವ ವಾಹನಗಳು  ಆಯಾ ಕಂಪನಿಯ ಅಧಿಕೃತ ಪತ್ರ ಹೊಂದಿರಬೇಕು. ಅಲ್ಲದೆ, ಸಂಚಾರದ ವೇಳೆ ನೌಕರರು ಮತ್ತು ವಾಹನಗಳಲ್ಲಿ ಕೋವಿಡ್‌ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು.

ಬೆಂಗಳೂರು, ಮೈಸೂರು, ಮಂಗಳೂರು, ಉಡುಪಿ– ಮಣಿಪಾಲ, ಬೀದರ್‌, ಕಲಬುರ್ಗಿ ಮತ್ತು ತುಮಕೂರು ನಗರದಲ್ಲಿ ಏ.10ರಿಂದ 20ರವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿ ಇರಲಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು