ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾರಾಂತ್ಯ ಕರ್ಫ್ಯೂ: ರಜೆ ಇದ್ದವರಿಗೆ ಆನ್‌ಲೈನ್ ತರಗತಿ

Last Updated 5 ಜನವರಿ 2022, 20:07 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ ಬೆಂಗಳೂರು ಉತ್ತರ ಮತ್ತು ದಕ್ಷಿಣ ಶೈಕ್ಷಣಿಕ ಜಿಲ್ಲೆಗಳಲ್ಲಿ ಎಲ್ಲ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳ ಪೂರ್ವ ಪ್ರಾಥಮಿಕ, ಎಲ್‌ಕೆಜಿ, ಯುಕೆಜಿ ಮತ್ತು 1 ರಿಂದ 9 ನೇ ತರಗತಿಗಳವರೆಗೆ ಇದೇ 6 ರಿಂದ 19 ರವರೆಗೆ ತಾತ್ಕಾಲಿಕವಾಗಿ ಸ್ಥಗಿತವಾಗಲಿದೆ.

ಈ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಈ ಹಿಂದಿನಂತೆ ಆನ್‌ಲೈನ್‌ ಮತ್ತು ಇತರೆ ವಿಧಾನಗಳ ಮೂಲಕ ಕಲಿಕಾ ಮತ್ತು ಬೋಧನಾ ಚಟುವಟಿಕೆ ನಡೆಸಬೇಕು. 10 ನೇ ತರಗತಿಗಳನ್ನು ಕೋವಿಡ್ ಮುಂಜಾಗ್ರತಾ ಮತ್ತು ಸುರಕ್ಷತಾ ವಿಧಾನಗಳನ್ನು ಕಟ್ಟುನಿಟ್ಟಾಗಿ ಅನುಸರಿಸಿ ಭೌತಿಕ ತರಗತಿಗಳನ್ನು ನಡೆಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ತಿಳಿಸಿದ್ದಾರೆ.

ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಕೋವಿಡ್‌ 19 ಎಲ್ಲ ಮುಂಜಾಗ್ರತಾ, ಸಾಕ್ಷರತಾ ಕ್ರಮಗಳನ್ನು ಅನುಸರಿಸಿ ಈಗ ನಡೆಸುತ್ತಿರುವಂತೆ ತರಗತಿಗಳನ್ನು ನಡೆಸಬೇಕು ಎಂದು ಸೂಚಿಸಿದ್ದಾರೆ.

ಬೆಂಗಳೂರು ನಗರದಲ್ಲಿ ಶಿಕ್ಷಕರು ಮತ್ತು ಇತರ ಸಿಬ್ಬಂದಿಗೆ ಶಾಲಾ ಹಾಜರಾತಿಯಿಂದ ವಿನಾಯಿತಿ ಇಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT