ಸೋಮವಾರ, ಏಪ್ರಿಲ್ 6, 2020
19 °C
ಕೊರೊನಾ ವೈರಸ್‌ ಆತಂಕ: ಮನೆಯಿಂದಲೇ ಕೆಲಸ ಮಾಡುತ್ತಿರುವ ಟೆಕಿಗಳು

ಕೋವಿಡ್ ಭೀತಿ: ಮೆಟ್ರೊ ಪ್ರಯಾಣಿಕರ ಸಂಖ್ಯೆ ಅಲ್ಪ ಇಳಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೊರೊನಾ ವೈರಸ್‌ ಹರಡುವ ಆತಂಕದಲ್ಲಿ ಬಹುತೇಕ ಐಟಿ ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ಮನೆಯಲ್ಲಿಯೇ ಕೆಲಸ ಮಾಡಲು ಅವಕಾಶ ನೀಡಿರುವುದರಿಂದ ಮೆಟ್ರೊ ರೈಲಿನಲ್ಲಿ ಸಂಚರಿಸುವವರ ಸಂಖ್ಯೆಯಲ್ಲಿ ಇಳಿಕೆಯಾಗಿದೆ. 

ಕಳೆದ ಫೆಬ್ರುವರಿಗೆ ಹೋಲಿಸಿದರೆ, ಮಾರ್ಚ್‌ನಲ್ಲಿ ಪ್ರಯಾಣಿಕರ ಸಂಖ್ಯೆ 30 ಸಾವಿರದಿಂದ 35 ಸಾವಿರ ಕಡಿಮೆಯಾಗಿದೆ. ಅಂದರೆ, ಪ್ರಯಾಣಿಕರ ಪ್ರಮಾಣ ಶೇ 8ರಷ್ಟು ಕಡಿಮೆಯಾಗಿದೆ. ಹತ್ತಿರದ ಸ್ಥಳಗಳಿಗೆ ತೆರಳುವವರು ಮೆಟ್ರೊ ರೈಲಿನ ಬದಲು, ಸ್ವಂತ ವಾಹನಗಳನ್ನು ಬಳಸಿರುವುದೂ ಕೂಡ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಲು ಕಾರಣ ಎನ್ನಲಾಗಿದೆ.  

‘ಮೆಟ್ರೊ ರೈಲು ಬಳಸುವವರಲ್ಲಿ ಐಟಿ ಕಂಪನಿಗಳ ಉದ್ಯೋಗಿಗಳ ಸಂಖ್ಯೆಯೇ ಹೆಚ್ಚು. ಆದರೆ, ಬಹುತೇಕ ಕಂಪನಿಗಳು ಮನೆಯಲ್ಲಿಯೇ ಕಚೇರಿ ಕಾರ್ಯ ನಿರ್ವಹಿಸುವಂತೆ ಸೂಚಿಸಿರುವುದರಿಂದ ಪ್ರಯಾಣಿಕರ ಸಂಖ್ಯೆಯಲ್ಲಿ ಅಲ್ಪ ಇಳಿಕೆಯಾಗಿದೆ’ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮದ ಹಿರಿಯ ಸಾರ್ವಜನಿಕ ಸಂಪರ್ಕಾಧಿಕಾರಿ ರವಿಪ್ರಕಾಶ್‌ ತಿಳಿಸಿದರು.


Caption

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು