ಭಾನುವಾರ, ಏಪ್ರಿಲ್ 11, 2021
30 °C

ಒಂದೇ ಕುಟುಂಬದ ಐವರಿಗೆ ಕೋವಿಡ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ನಗರಕ್ಕೆ ಬೇರೆ ಕಡೆಗಳಿಂದ ಬಂದಿದ್ದವರಲ್ಲಿ ಸೋಂಕು ಹೆಚ್ಚುತ್ತಿದ್ದು, ಸೋಮವಾರ ಒಂದೇ ಕುಟುಂ
ಬದ ಐವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಒಟ್ಟಾರೆ ಆರು ಮಂದಿ ಈ ಮಾದರಿಯ ಸೋಂಕಿಗೆ ತುತ್ತಾಗಿದ್ದಾರೆ.

ರಾಜನಹಳ್ಳಿ ಮುಖ್ಯರಸ್ತೆಯ ಥಣಿಸಂದ್ರದ ನವಗ್ರಹ ಅಪಾರ್ಟ್‌ಮೆಂಟ್‌ ಸಮುಚ್ಚಯದ ಕ್ಲಸ್ಟರ್‌ನಲ್ಲಿ ಈ ಪ್ರಕರಣಗಳು ವರದಿಯಾಗಿವೆ. ಸೋಂಕು ದೃಢಪಟ್ಟವರು ಒಂದು ವಾರದ ಹಿಂದೆ ತಿರುಪತಿಗೆ ಹೋಗಿ ಬಂದಿದ್ದರು. ಈ ಪೈಕಿ ಮೊದಲು ಒಬ್ಬರಲ್ಲಿ ಕೆಮ್ಮು, ಶೀತ ಕಾಣಿಸಿಕೊಂಡ ಕಾರಣ ಸೋಂಕು ಪರೀಕ್ಷೆಗೆ ಒಳಗಾಗಿದ್ದು, ಸೋಂಕು ತಗುಲಿರುವುದು ದೃಢಪಟ್ಟಿದೆ. ವ್ಯಕ್ತಿಯು ತಮ್ಮೊಂದಿಗೆ ಇದ್ದ ಕುಟುಂಬ ಸದಸ್ಯರಿಗೆ ಪರೀಕ್ಷೆ ಮಾಡಿಸಿಕೊಳ್ಳುವಂತೆ ಹೇಳಿದ್ದರು. ಆಗ ಕುಟುಂಬದ ಎಲ್ಲರೂ ಸೋಂಕು ಪರೀಕ್ಷೆಗೆ ಒಳಗಾಗಿದ್ದರು.

ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದ 54 ಮಂದಿ ಹಾಗೂ ಪರೋಕ್ಷ ಸಂಪರ್ಕ ಹೊಂದಿದ್ದ 150 ಮಂದಿಯನ್ನು ಪರೀಕ್ಷೆಗೆ ಒಳಪಡಿಸಿ ಕ್ವಾರಂಟೈನ್ ಮಾಡಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು