ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ನಿಯಮ ಉಲ್ಲಂಘನೆ: ಮಳಿಗೆಗಳಿಗೆ ದಂಡ

Last Updated 7 ಏಪ್ರಿಲ್ 2021, 21:32 IST
ಅಕ್ಷರ ಗಾತ್ರ

ಬೊಮ್ಮನಹಳ್ಳಿ: ಕೋವಿಡ್ ನಿಯಮಗಳನ್ನು ಪಾಲಿಸದ ಮಳಿಗೆಗಳ ಮೇಲೆ ಬಿಬಿಎಂಪಿ ಅಧಿಕಾರಿಗಳ ತಂಡವು ಬುಧವಾರ ದಾಳಿ ನಡೆಸಿ ದಂಡ ವಿಧಿಸಿತು.

ಬಿಬಿಎಂಪಿ ಬೊಮ್ಮನಹಳ್ಳಿ ವಲಯದ ಎಚ್.ಎಸ್.ಆರ್ ಬಡಾವಣೆಯಕೆಲ ವಾಣಿಜ್ಯ ಮಳಿಗೆಗಳಲ್ಲಿ ಗ್ರಾಹಕರು ಅಂತರ ಕಾಯ್ದುಕೊಳ್ಳದೇ ಹಾಗೂ ಮಾಸ್ಕ್ ಧರಿಸದೇ ಇರುವುದನ್ನು ಗಮನಿಸಿದ ಅಧಿಕಾರಿಗಳ ತಂಡವು, ಅಂಗಡಿಗಳ ಮಾಲೀಕರಿಗೆ ದಂಡ ವಿಧಿಸಿದ್ದಲ್ಲೇ, ಸ್ಥಳದಲ್ಲೇ ಬೀಗ ಮುದ್ರೆ ಹಾಕಿ ಕಠಿಣ ಕ್ರಮ ಕೈಗೊಂಡಿತು. ಎಂಟಿಆರ್ ಹೋಟೆಲ್‌ನಲ್ಲಿ ಕೋವಿಡ್ ನಿಯಮ ಪಾಲಿಸದ ಕಾರಣ ₹10 ಸಾವಿರ ದಂಡ ವಿಧಿಸಲಾಗಿದೆ.

ಬೊಮ್ಮನಹಳ್ಳಿ ವ್ಯಾಪ್ತಿಯಲ್ಲಿ ಪ್ರತಿದಿನ 400ಕ್ಕೂ ಅಧಿಕ ಕೇಸುಗಳು ದಾಖಲಾಗುತ್ತಿದ್ದು, ಎರಡನೇ ಬಾರಿ ನಿಯಮ ಉಲ್ಲಂಘಿಸಿದ ಮಳಿಗೆಗಳ ವ್ಯಾಪಾರ ಪರವಾನಗಿ ರದ್ದು ಮಾಡುವ ಎಚ್ಚರಿಕೆಯನ್ನೂ ನೀಡಲಾಗಿದೆ.

‘ಈಗಾಗಲೇ ಐದು ಸಾವಿರಕ್ಕೂ ಅಧಿಕ ಮಂದಿಗೆ ಲಸಿಕೆ ನೀಡಲಾಗಿದೆ. ಕೋವಿಡ್ ಪರೀಕ್ಷೆಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳಲು ನಿರ್ಧರಿಸಲಾಗಿದೆ’ ಎಂದು ಬೊಮ್ಮನಹಳ್ಳಿ ಜಂಟಿ ಆಯುಕ್ತ ಎಂ.ರಾಮಕೃಷ್ಣ ಹೇಳಿದರು.

ಬಿಬಿಎಂಪಿ ಆರೋಗ್ಯಾಧಿಕಾರಿ ಡಾ.ಸವಿತಾ, ‘ಕೋವಿಡ್ ನಿಯಮ ಉಲ್ಲಂಘಿಸಿದ ಕಲ್ಪವೃಕ್ಷ ಹೋಟೆಲ್ ಹಾಗು ಮೋರ್ ಮಳಿಗೆಯನ್ನು ಬಂದ್ ಮಾಡಿದ್ದೇವೆ. ಕೆಲ ಮಳಿಗೆಗಳಿಗೆ ಎಚ್ಚರಿಕೆ ನೀಡಿ ದಂಡ ವಿಧಿಸಿದ್ದೇವೆ‘ ಎಂದರು.

ವೈದ್ಯಾಧಿಕಾರಿಗಳಾದ ಡಾ. ನಾಗೇಂದ್ರ, ಡಾ. ಕುಮಾರ್, ಆರೋಗ್ಯ ನಿರೀಕ್ಷಕ ವಿನೋದ್ ಹಾಗೂ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT