ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: ‘1912’ ಏಕೀಕೃತ ಸಹಾಯವಾಣಿ

Last Updated 16 ಏಪ್ರಿಲ್ 2021, 5:11 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್‌ಗೆ ಸಂಬಂಧಿಸಿದಂತೆ ಜನರಲ್ಲಿ ಜಾಗೃತಿ ಮೂಡಿಸುವ ಮತ್ತು ನೆರವು ಒದಗಿಸುವ ನಿಟ್ಟಿನಲ್ಲಿ ಬಿಬಿಎಂಪಿಯು ಬೆಸ್ಕಾಂ ಸಹಯೋಗದಲ್ಲಿ ‘1912’ ಸಂಖ್ಯೆೆಯ ಏಕೀಕೃತ ಸಹಾಯವಾಣಿ ಪ್ರಾರಂಭಿಸಿದೆ.

ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್‌ಸಿಂಗ್ ಮತ್ತು ಮುಖ್ಯ ಆಯುಕ್ತ ಗೌರವ್‌ ಗುಪ್ತ ಗುರುವಾರ ಈ ಸಹಾಯವಾಣಿಗೆ ಚಾಲನೆ ನೀಡಿದರು.

‘ಕೋವಿಡ್ ಕುರಿತ ಸಾಮಾನ್ಯ ಪ್ರಶ್ನೆಗಳಿಗೆ 1912 ಸಿಬ್ಬಂದಿ ಮಾಹಿತಿ ನೀಡಲಿದ್ದಾರೆ. ಹೆಚ್ಚಿನ ಮಾಹಿತಿ ಅಗತ್ಯವಿದ್ದಲ್ಲಿ ಕರೆಗಳನ್ನು 104 ಸಹಾಯವಾಣಿಗೆ, ಶೀತ ಜ್ವರ ಮತ್ತು ತೀವ್ರ ಉಸಿರಾಟ ತೊಂದರೆ ಲಕ್ಷಣಗಳಿದ್ದರೆ ಅವರ ಕರೆಗಳನ್ನು 108ಕ್ಕೆೆ ವರ್ಗಾಯಿಸಿ ತುರ್ತು ಚಿಕಿತ್ಸೆೆ ಮತ್ತು ಆ್ಯಂಬುಲೆನ್ಸ್‌ ವ್ಯವಸ್ಥೆೆ ಕಲ್ಪಿಸಲಾಗುತ್ತದೆ’ ಎಂದು ಮಾಹಿತಿ ನೀಡಿದರು.

ಕೊರೊನಾ ತುರ್ತು ಚಿಕಿತ್ಸೆಅಗತ್ಯವಿಲ್ಲದ ಸೋಂಕಿತರು ಕರೆ ಮಾಡಿದರೆ, ಅವರ ಎಸ್‌ಆರ್‌ಎಫ್‌ಐಡಿ ಮತ್ತು ಬಿಯು ಸಂಖ್ಯೆಪಡೆದು ಪಾಲಿಕೆಗೆ ಕಳುಹಿಸಲಾಗುತ್ತದೆ. ಪಾಲಿಕೆ ವೈದ್ಯಕೀಯ ತಂಡವು ರೋಗಿಗೆ ಆಸ್ಪತ್ರೆಯ ಹಾಸಿಗೆ ಅಗತ್ಯತೆಯ ಬಗ್ಗೆಪರಿಶೀಲನೆ ಮಾಡಿ, ಹೋಂ ಐಸೋಲೇಷನ್ ಅಥವಾ ಕೋವಿಡ್ ಆರೈಕೆ ಕೇಂದ್ರಕ್ಕೆಕಳುಹಿಸಲಾಗುತ್ತದೆ ಎಂದು ಹೇಳಿದರು.

ಸೋಂಕಿತರು ಸರ್ಕಾರಿ ಕೋಟಾದ ಅಡಿಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಬಿಲ್ಲುಗಳನ್ನು ಇತ್ಯರ್ಥ ಪಡಿಸುವ ದೂರುಗಳಿದ್ದರೆ ಅಂತಹ ಕರೆಗಳನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನ ತಂಡಕ್ಕೆವರ್ಗಾವಣೆ ಮಾಡಲಾಗುತ್ತದೆ. ಸಹಾಯವಾಣಿಗೆ 15 ಲೈನ್‌ಗಳನ್ನು ಸಂಪರ್ಕ ಮಾಡಿದ್ದು, ಇನ್ನು 15 ಲೈನ್‌ಗಳನ್ನು ಸೇರಿಸಲಾಗುವುದು ಎಂದರು.

ವಿಶೇಷ ಆಯುಕ್ತ ರಾಜೇಂದ್ರ ಚೋಳನ್, ರೆಡ್ಡಿ ಶಂಕರ ಬಾಬು ಹಾಗೂ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಗೌಡ ಸೇರಿದಂತೆ ಮತ್ತಿತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT