ಬುಧವಾರ, ಆಗಸ್ಟ್ 5, 2020
25 °C

ತುಮಕೂರು ರಸ್ತೆಯ ಬಿಐಇಸಿಯಲ್ಲಿ ದೇಶದ ಅತಿದೊಡ್ಡ ಕೋವಿಡ್ ಆಸ್ಪತ್ರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ತುಮಕೂರು ರಸ್ತೆಯ ಅಂತರರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ(ಬಿಐಇಸಿ) 10,100 ಹಾಸಿಗೆಗಳ ಕೋವಿಡ್ ಸೋಂಕಿತರ ಆರೈಕೆ ಕೇಂದ್ರ ಸಿದ್ಧಗೊಂಡಿದೆ.

ದೇಶದಲ್ಲೇ ದೊಡ್ಡದಾದ ಈ ಆರೈಕೆ ಕೇಂದ್ರದ ತಯಾರಿಯನ್ನು ಶಾಸಕ ಎಸ್‌.ಆರ್. ವಿಶ್ವನಾಥ್, ಬಿಬಿಎಂಪಿ ಆಯುಕ್ತ ಬಿ.ಎಚ್.ಅನಿಲ್‌ಕುಮಾರ್, ಜಂಟಿ ಆಯುಕ್ತ ಸರ್ಫರಾಜ್ ಖಾನ್ ಭಾನುವಾರ ಪರಿಶೀಲಿಸಿದರು.

ಲಕ್ಷಣ ರಹಿತ ಸೋಂಕಿತರ ಚಿಕಿತ್ಸೆಗೆ ಇಲ್ಲಿ ವ್ಯವಸ್ಥೆ ಮಾಡಲಾಗಿದೆ. ಸೋಂಕಿತರ ಮನರಂಜನೆಗೆ ಎಲ್‌ಇಡಿ ಪರದೆಗಳನ್ನು ಅಳವಡಿಸಲಾಗಿದೆ. ತುರ್ತು ಸಂದರ್ಭದಲ್ಲಿ ಚಿಕಿತ್ಸೆ ನೀಡಲು ಆಮ್ಲಜನಕಯುಕ್ತ ಹಾಸಿಗೆಗಳ ಪ್ರತ್ಯೇಕ ವಿಭಾಗವೂ ಇಲ್ಲಿದೆ. 

‘150 ವೈದ್ಯರು, ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಸಿಬ್ಬಂದಿಗಳು ಕಾರ್ಯ ನಿರ್ವಹಿಸಲಿದ್ದಾರೆ. ಗುಣಮಟ್ಟದ ಆಹಾರ ವ್ಯವಸ್ಥೆ, ಶೌಚಾಲಯ ಹಾಗೂ ಅಗತ್ಯ ಸೇವೆಗಳನ್ನು ಕಲ್ಪಿಸಲಾಗಿದೆ’ ಎಂದು ಆಯುಕ್ತ ಬಿ.ಎಚ್.ಅನಿಲ್‌ಕುಮಾರ್ ಟೀಟ್ ಮಾಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು