ಭಾನುವಾರ, 25 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್: ಚಿಕಿತ್ಸೆಗೆ ‘ಮೇಕ್‌ ಶಿಫ್ಟ್’ ಆಸ್ಪತ್ರೆ

Published 19 ಡಿಸೆಂಬರ್ 2023, 23:30 IST
Last Updated 19 ಡಿಸೆಂಬರ್ 2023, 23:30 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ಕೊರೊನಾ ವೈರಾಣುವಿನ ರೂಪಾಂತರಿ ಜೆಎನ್‌.1 ಪತ್ತೆಯಾದಲ್ಲಿ ಚಿಕಿತ್ಸೆ ಒದಗಿಸಲು ರಾಜೀವ್ ಗಾಂಧಿ ಎದೆರೋಗಗಳ ಸಂಸ್ಥೆಯ (ಆರ್‌ಜಿಐಸಿಡಿ) ಹಿಂಭಾಗದಲ್ಲಿರುವ ತಾತ್ಕಾಲಿಕ ಆಸ್ಪತ್ರೆ (ಮೇಕ್‌ ಶಿಫ್ಟ್) ಗುರುತಿಸಲಾಗಿದೆ. 

ನಗರದಲ್ಲಿ 2020ರ ಮಾರ್ಚ್‌ನಲ್ಲಿ ಕೋವಿಡ್ ಪ್ರಕರಣಗಳು ಪತ್ತೆಯಾದಾಗ ಸೋಂಕಿತರ ಚಿಕಿತ್ಸೆಗೆ ಆರ್‌ಜಿಐಸಿಡಿ ಆಸ್ಪತ್ರೆ ಗುರುತಿಸಲಾಗಿತ್ತು. ಕೊರೊನಾ ಸೋಂಕಿತರ ಸಂಖ್ಯೆ ಏರಿಕೆ ಕಂಡಾಗ ಆಸ್ಪತ್ರೆಯನ್ನು ಪೂರ್ಣ ಪ್ರಮಾಣದಲ್ಲಿ ಕೋವಿಡ್ ಆಸ್ಪತ್ರೆಯನ್ನಾಗಿ ಪರಿವರ್ತಿಸಿ, ಚಿಕಿತ್ಸೆ ನೀಡಲಾಗಿತ್ತು.

ಕೋವಿಡ್ ಎರಡನೇ ಅಲೆ ಕಾಣಿಸಿಕೊಂಡ ಬಳಿಕ ಶೀತ ಜ್ವರ ಮಾದರಿಯ ಅನಾರೋಗ್ಯ ಸಮಸ್ಯೆ (ಐಎಲ್‌ಐ) ಹಾಗೂ ತೀವ್ರ ಉಸಿರಾಟದ ಸಮಸ್ಯೆ ಇರುವವರಿಗೆ ಸಂಸ್ಥೆಯ ಹಿಂಭಾಗ ತಾತ್ಕಾಲಿಕ ಆಸ್ಪತ್ರೆ (ಮೇಕ್‌ ಶಿಫ್ಟ್) ನಿರ್ಮಿಸಲಾಗಿತ್ತು. 200 ಹಾಸಿಗೆಗಳ ಈ ಆಸ್ಪತ್ರೆಯನ್ನು ಕೋವಿಡ್ ನಿಯಂತ್ರಣಕ್ಕೆ ಬಂದಾಗಿನಿಂದ ಕೋವಿಡೇತರ ಚಿಕಿತ್ಸೆಗೆ ಬಳಸಿಕೊಳ್ಳಲಾಗುತ್ತಿದೆ. ಇದನ್ನು ಕಾರ್ಪೊರೇಟ್‌ ಕಂಪನಿಗಳ ಸಾಮಾಜಿಕ ಹೊಣೆಗಾರಿಕೆ ನಿಧಿ (ಸಿಎಸ್‌ಆರ್‌) ಅಡಿ ₹ 200 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ.

ಮೇಕ್ ಶಿಫ್ಟ್‌ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆಗೆ 171 ಹಾಸಿಗೆಗಳು ಲಭ್ಯವಾಗಲಿವೆ. 25 ತೀವ್ರ ನಿಗಾ ಘಟಕ ಹಾಸಿಗೆಯನ್ನು ಆಸ್ಪತ್ರೆ ಒಳಗೊಂಡಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT