ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೋಟೆಲ್–ರೆಸಾರ್ಟ್‌ಗಳಿಗೆ ಮಾರ್ಗಸೂಚಿ

Last Updated 1 ಜನವರಿ 2021, 20:51 IST
ಅಕ್ಷರ ಗಾತ್ರ

ಬೆಂಗಳೂರು: ಹೋಟೆಲ್–ರೆಸಾರ್ಟ್‌ಗಳಲ್ಲಿ ಮಾದಕ ವಸ್ತುಗಳ ಬಳಕೆ, ಸೇವನೆಯಂತಹ ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಯುವುದು ಹಾಗೂ ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಪ್ರವಾಸೋದ್ಯಮ ಇಲಾಖೆಯು ಹೊಸ ಮಾರ್ಗಸೂಚಿ ಹೊರಡಿಸಿದೆ.

ಬೆಂಗಳೂರು ನಗರ ವ್ಯಾಪ್ತಿಗೆ ಒಳಪಡುವ ಅನುಮೋದಿತ ಹೋಟೆಲ್‌ ಮತ್ತು ರೆಸಾರ್ಟ್‌ಗಳು ಸ್ಥಳೀಯ ಪೊಲೀಸ್ ಠಾಣೆ ಹಾಗೂ ಪಾಲಿಕೆ ಪ್ರಾಧಿಕಾರಗಳಿಂದ ನಿರಕ್ಷೇಪಣಾ ಪತ್ರವನ್ನು ಕಡ್ಡಾಯವಾಗಿ ಹೊಂದಿರಬೇಕು. ಮಾಲಿನ್ಯ ನಿಯಂತ್ರಣ ಮಂಡಳಿ, ಅರಣ್ಯ ಇಲಾಖೆ, ಆಹಾರ ಸುರಕ್ಷತೆ ಗುಣಮಟ್ಟ ಪ್ರಾಧಿಕಾರಗಳಿಂದ ಅನುಮತಿ ಪತ್ರ ಪಡೆದಿರಬೇಕು.

‘ವೈದ್ಯಕೀಯ, ಸಿಸಿಟಿವಿ ಕ್ಯಾಮರಾ, ಭದ್ರತೆ ಸೇರಿದಂತೆ ಪ್ರವಾಸಿಗರ ಸುರಕ್ಷತೆಗೆ ಕೈಗೊಂಡಿರುವ ಕ್ರಮಗಳು ಹಾಗೂ ಮಾಸಿಕ ಪ್ರವಾಸಿಗರ ಅಂಕಿ–ಅಂಶಗಳನ್ನು ಇಲಾಖೆಗೆ ಸಲ್ಲಿಸಬೇಕು. ವಾಸ್ತವ್ಯ ಹಾಗೂ ಪ್ರವೇಶಕ್ಕೆ ನಿಗದಿಪಡಿಸಿರುವ ದರಪಟ್ಟಿಯನ್ನು ಪ್ರದರ್ಶಿಸಿರುವ ಬಗ್ಗೆ ವರದಿ ಸಲ್ಲಿಸಬೇಕು. ಕೋವಿಡ್‌ ಮುಂಜಾಗ್ರತಾ ಕ್ರಮಗಳ ಸೂಚನಾ ಫಲಕಗಳನ್ನು ಅಳವಡಿಸಬೇಕು’ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಈ ಸೂಚನೆಗಳನ್ನು ಪಾಲಿಸುತ್ತಿರುವ ಕುರಿತು 15 ದಿನದೊಳಗೆ ಸೂಕ್ತ ದಾಖಲೆಗಳನ್ನು ಕಚೇರಿಗೆ ತಲುಪಿಸಬೇಕು. ಇಲ್ಲದಿದ್ದರೆ ಅನುಮತಿ ಪಡೆಯುವವರೆಗೆ ವ್ಯವಹಾರ ಸ್ಥಗಿತಗೊಳಿಸಬೇಕು. ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದೆ.

ವಿಳಾಸ: ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ, ಉಪನಿರ್ದೇಶಕರ ಕಚೇರಿ, ಬೆಂಗಳೂರು ವಿಭಾಗ, ಮೈ ಶುಗರ್ ಕಂಪನಿ ಲಿಮಿಟೆಡ್ ಕಟ್ಟಡ, 1ನೇ ಮಹಡಿ, ಜೆ.ಸಿ.ರಸ್ತೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT