ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ಓಮೈಕ್ರಾನ್: ಚಿಕಿತ್ಸೆಗೆ 320 ಹಾಸಿಗೆ

Last Updated 3 ಡಿಸೆಂಬರ್ 2021, 16:38 IST
ಅಕ್ಷರ ಗಾತ್ರ

ಬೆಂಗಳೂರು: ಕೊರೊನಾ ವೈರಾಣುವಿನ ನೂತನ ತಳಿ ಓಮೈಕ್ರಾನ್ ನಗರದಲ್ಲಿ ಕಾಣಿಸಿಕೊಂಡಿರುವುದರಿಂದ ಸೋಂಕಿತರ ಚಿಕಿತ್ಸೆಗೆ ರಾಜಧಾನಿಯಲ್ಲಿ ಮೀಸಲು ಹಾಸಿಗೆಗಳ ಸಂಖ್ಯೆಯನ್ನು 320ಕ್ಕೆ ಏರಿಕೆ ಮಾಡಲಾಗುತ್ತಿದೆ.

ಈಗಾಗಲೇ ಬೌರಿಂಗ್ ಆಸ್ಪತ್ರೆಯಲ್ಲಿ 120 ಹಾಸಿಗೆಗಳನ್ನು ವ್ಯವಸ್ಥೆ ಮಾಡಲಾಗಿದೆ. ಇವುಗಳಲ್ಲಿ 60 ಹಾಸಿಗೆಗಳನ್ನು ಓಮೈಕ್ರಾನ್ ದೃಢಪಟ್ಟವರಿಗೆ, ಇನ್ನುಳಿದ 60 ಹಾಸಿಗೆಗಳು ಶಂಕಿತರಿಗೆ ಮೀಸಲಿಡಲಾಗಿದೆ.ನೂತನ ತಳಿಯ ವೈರಾಣು ವೇಗವಾಗಿ ಹರಡುವ ಬಗ್ಗೆ ವೈದ್ಯಕೀಯ ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ. ಹೀಗಾಗಿ,ಇದೇ 10ರೊಳಗೆ ನೂತನ ತಳಿಯ ವೈರಾಣುವಿನ ಚಿಕಿತ್ಸೆಗೆ ಸಂಬಂಧಿಸಿದಂತೆ 200 ಹಾಸಿಗೆಗಳನ್ನು ಸಜ್ಜುಗೊಳಿಸುವಂತೆರಾಜೀವ್‌ ಗಾಂಧಿ ಎದೆರೋಗಗಳ ಆಸ್ಪತ್ರೆಗೆ ಸರ್ಕಾರ ಸೂಚಿಸಿದೆ.

‘ವಿಮಾನ ನಿಲ್ದಾಣಗಳಲ್ಲಿ ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದೆ. ಸೋಂಕು ದೃಢಪಟ್ಟಲ್ಲಿ ವ್ಯಕ್ತಿಯನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಒದಗಿಸಲಾಗುತ್ತದೆ. ಅವರ ಮಾದರಿಗಳನ್ನು ವೈರಾಣುವಿನ ವಂಶವಾಹಿ ಸಂರಚನಾ ವಿಶ್ಲೇಷಣೆಗೆ (ಜೀನೋಮ್‌ ಸೀಕ್ವೆನ್ಸಿಂಗ್‌) ಕಳುಹಿಸಲಾಗುತ್ತದೆ. ಮುನ್ನೆಚ್ಚರಿಕೆ ಕ್ರಮವಾಗಿ ರಾಜೀವ್‌ ಗಾಂಧಿ ಎದೆರೋಗಗಳ ಆಸ್ಪತ್ರೆಯಲ್ಲಿಯೂ ಹಾಸಿಗೆಗೆ ವ್ಯವಸ್ಥೆ ಮಾಡಲಾಗುತ್ತಿದೆ’ ಎಂದು ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದರು.

‘ಇತ್ತೀಚೆಗೆ ಉದ್ಘಾಟನೆಗೊಂಡಿರುವ ಕೋವಿಡ್ ಫೀಲ್ಡ್‌ ಆಸ್ಪತ್ರೆಯಲ್ಲಿ 200 ಹಾಸಿಗೆಗಳು ಲಭ್ಯವಿದ್ದು, ಅಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು. ಎಲ್ಲ ರೀತಿಯ ಸಿದ್ಧತೆಯನ್ನೂ ಮಾಡಿಕೊಂಡಿದ್ದೇವೆ’ ಎಂದುರಾಜೀವ್‌ ಗಾಂಧಿ ಎದೆರೋಗಗಳ ಆಸ್ಪತ್ರೆಯ ನಿರ್ದೇಶಕ ಡಾ.ಸಿ. ನಾಗರಾಜ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT