ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌-19: ಇನ್ನಷ್ಟು ಪ್ರದೇಶ ಸೀಲ್‌ಡೌನ್‌ ಇಲ್ಲ

ಬಿಬಿಎಂಪಿ ಆಯುಕ್ತ ಅನಿಲ್‌ ಕುಮಾರ್‌ ಸ್ಪಷ್ಟನೆ
Last Updated 25 ಜೂನ್ 2020, 19:55 IST
ಅಕ್ಷರ ಗಾತ್ರ

ಬೆಂಗಳೂರು: ‘ನಗರದಲ್ಲಿ ಇನ್ನಷ್ಟು ಪ್ರದೇಶಗಳನ್ನು ಸೀಲ್‌ಡೌನ್‌ ಮಾಡುವ ಪ್ರಸ್ತಾವ ಸದ್ಯಕ್ಕೆ ನಮ್ಮ ಮುಂದಿಲ್ಲ’ ಎಂದು ಬಿಬಿಎಂಪಿ ಆಯುಕ್ತ ಬಿ.ಎಚ್‌.ಅನಿಲ್‌ ಕುಮಾರ್‌ ಸ್ಪಷ್ಟಪಡಿಸಿದ್ದಾರೆ.

‘ಸೋಂಕು ದೃಢಪಟ್ಟವರನ್ನು ಆಸ್ಪತ್ರೆಗೆ ವರ್ಗಾಯಿಸಲು 24 ಗಂಟೆವರೆಗೂ ಸಮಯ ತಗುಲುತ್ತಿದೆ ಎಂದು ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಆ್ಯಂಬುಲೆನ್ಸ್‌ಗಳ ಸಂಖ್ಯೆ 100ಕ್ಕೆ ಹೆಚ್ಚಿಸಲಿದ್ದೇವೆ. ಈ ಸಂಖ್ಯೆಯನ್ನು 300ಕ್ಕೆ ಹೆಚ್ಚಿಸುವುದಕ್ಕೂ ಸಿದ್ಧತೆ ಮಾಡಿಕೊಂಡಿದ್ದೇವೆ. ಸೋಂಕು ದೃಢಪಟ್ಟವರನ್ನು ಆಸ್ಪತ್ರೆಗೆ ದಾಖಲಿಸಲು ಇನ್ನು 6 ಗಂಟೆಗಿಂತ ಹೆಚ್ಚು ಸಮಯ ತಗಲದಂತೆ ಕ್ರಮ ವಹಿಸುತ್ತೇವೆ’ ಎಂದರು.

‘ರೋಗ ಲಕ್ಷಣ ಇಲ್ಲದ ಸೋಂಕಿತರು ಕೋವಿಡ್‌ ಆರೈಕೆ ಕೇಂದ್ರಕ್ಕೆ ರವಾನಿಸುತ್ತೇವೆ. ಈ ಕೇಂದ್ರಗಳಲ್ಲಿ ಸದ್ಯ 1,300 ಹಾಸಿಗೆಗಳ ವ್ಯವಸ್ಥೆ ಕಲ್ಪಿಸಿದ್ದೇವೆ.ಹಜ್‌ ಭವನ ಮತ್ತು ಶ್ರೀಶ್ರೀ ರವಿಶಂಕರ್‌ ಗುರೂಜಿ ಆಯುರ್ವೇದ ಆಸ್ಪತ್ರೆಗಳಲ್ಲಿ ಈಗಾಗಲೇ ತಲಾ 400 ಹಾಸಿಗೆಗಳನ್ನು ಸಜ್ಜುಗೊಳಿಸಲಾಗಿದೆ. ವೈದ್ಯರು, ಅರೆ ವೈದ್ಯಕೀಯ ಸಿಬ್ಬಂದಿಯನ್ನೂ ನೇಮಿಸಿದ್ದೇವೆ. ಊಟದ ವ್ಯವಸ್ಥೆಯನ್ನು ಮಾಡಿದ್ದೇವೆ’ ಎಂದು ಮಾಹಿತಿ ನೀಡಿದರು.

‘ಈ ಹಿಂದೆ ಸೋಂಕಿತರ ತಪಾಸಣೆಯನ್ನು ಆಸ್ಪತ್ರೆಗಳಲ್ಲಿ ನಡೆಸಲಾಗುತ್ತಿತ್ತು. ಈ ಪ್ರಕ್ರಿಯೆಯನ್ನು ಸರಳಗೊಳಿಸಿದ್ದೇವೆ. ಸೋಂಕಿತರ ಮನೆಯಲ್ಲೇ ಆರೋಗ್ಯ ತಪಾಸಣೆ ನಡೆಸಲಾಗುತ್ತದೆ. ರೋಗ ಲಕ್ಷಣ ಆಧರಿಸಿ ಅವರನ್ನು ಎಲ್ಲಿಗೆ (ಆರೈಕೆ ಕೇಂದ್ರಕ್ಕೆ ಅಥವಾ ಆಸ್ಪತ್ರೆಗೆ) ರವಾನಿಸಬೇಕು ಎಂಬುದನ್ನು ನಿರ್ಧರಿಸಲಾಗುತ್ತದೆ’ ಎಂದರು.

ಹಾಸಿಗೆ ಹಂಚಿಕೆಗೆ ತಂತ್ರಾಂಶ

‘ಕೋವಿಡ್‌ ಸಂತ್ರಸ್ತರ ಆರೈಕೆಗೆ ಹಾಸಿಗೆ ಹಂಚಿಕೆ ಮಾಡುವುದಕ್ಕೂ ತಂತ್ರಾಂಶ ರೂಪಿಸಲಾಗಿದೆ. ಬಿಬಿಎಂಪಿ ವಾರ್‌ರೂಂನಲ್ಲಿ ಸಿಗುವ ಆನ್‌ಲೈನ್‌ ಮಾಹಿತಿ ಆಧರಿಸಿ ಈ ತಂತ್ರಾಂಶ ಕಾರ್ಯನಿರ್ವಹಿಸಲಿದೆ’ ಎಂದು ಆಯುಕ್ತರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT