ಬೆಂಗಳೂರು: ನಗರದಲ್ಲಿ ಕೋವಿಡ್ ಹರಡುವಿಕೆ ಹತೋಟಿಗೆ ಬಂದಿದೆ. ಆದರೆ, ನೆರೆ ರಾಜ್ಯಗಳಾದ ಮಹಾರಾಷ್ಟ್ರ ಹಾಗೂ ಕೇರಳಗಳಲ್ಲಿ ಸೊಂಕು ಹೆಚ್ಚಳವಾಗುತ್ತಿರುವುದು ಬಿಬಿಎಂಪಿ ಅಧಿಕಾರಿಗಳ ಕಳವಳಕ್ಕೆ ಕಾರಣವಾಗಿದೆ.
ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ, ‘ಸಾರ್ವಜನಿಕ ಆರೋಗ್ಯ ರಕ್ಷಣೆಯ ಉದ್ದೇಶದಿಂದಲೇಪ್ರತಿಬಂಧಗಳನ್ನು ಜಾರಿಗೊಳಿಸಲಾಗುತ್ತದೆ. ಅವುಗಳನ್ನು ಸಂಪೂರ್ಣ ತೆರವುಗೊಳಿಸುವ ಮುನ್ನ ಕೋವಿಡ್ ಎಷ್ಟರಮಟ್ಟಿಗೆ ಹತೋಟಿಗೆ ಬಂದಿವೆ ಎಂಬುದನ್ನು ಪರಿಗಣಿಸಬೇಕಾಗುತ್ತದೆ. ನಗರದಲ್ಲಿ ಕೋವಿಡ್ ಸೊಂಕು ಹರಡುವಿಕೆ ಸದ್ಯ ನಿಯಂತ್ರಣಕ್ಕೆ ಬಂದಿದೆ. ಆದರೂ ಈಗಲೂ ರಾತ್ರಿ ಕರ್ಫ್ಯೂ ಮುಂದುವರೆದಿದೆ. ಅದನ್ನೂ ಕೈಬಿಡುವ ಮುನ್ನ ಕೇರಳ ಹಾಗೂ ಮಹಾರಾಷ್ಟ್ರಗಳಲ್ಲಿ ಕೋವಿಡ್ ಪ್ರಕರಣಗಳು ಮತ್ತೆ ಹೆಚ್ಚುತ್ತಿರುವ ಬಗ್ಗೆಯೂ ಗಮನ ಹರಿಸಬೇಕಾಗುತ್ತದೆ’ ಎಂದರು.
ಕೋವಿಡ್ ಸಂಕಷ್ಟದ ಕಾಲದಲ್ಲೂ ಬಿಬಿಎಂಪಿ ಅನಗತ್ಯವಾಗಿ ಹೊಸ ವಾಹನ ಖರೀದಿಸುತ್ತಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ‘ಅವಶ್ಯಕತೆಗಿಂತ ಹೆಚ್ಚು ವಾಹನ ಖರೀದಿ ಸಲ್ಲದು. ಈ ವಿಚಾರದಲ್ಲಿ ಲೋಪಗಳಾಗಿದ್ದರೆ ಸರಿಪಡಿಸಲಿದ್ದೇವೆ’ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.