ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವಿದೇಶಿ ಪ್ರಯಾಣಿಕರ ಮೇಲೆ ನಿಗಾ

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿದೇಶದಿಂದ ಬರುವ ಪ್ರಯಾಣಿಕರ ಮೇಲೆ ನಿಗಾ ವಹಿಸಲಾಗಿದೆ.
ಕಳೆದ ಕೆಲವು ದಿನಗಳಿಂದ ಕೋವಿಡ್ ನಿರ್ಬಂಧ ಸಡಿಲಿಕೆ ಮಾಡಲಾಗಿತ್ತು. ದಾಖಲೆ ಪರಿಶೀಲನೆ ಹೊರತುಪಡಿಸಿ ಕೋವಿಡ್ ತಪಾಸಣೆ ನಡೆಸುತ್ತಿರಲಿಲ್ಲ. ಕೇಂದ್ರ ಸರ್ಕಾರವು ಮಾರ್ಗಸೂಚಿ ಪ್ರಕಟಿಸಿದ್ದು, ಅದರಂತೆ ಬುಧವಾರದಿಂದ ಉಷ್ಣಾಂಶ ತಪಾಸಣೆ ಮರು ಆರಂಭಿಸಲಾಗಿದೆ.
ಅದಕ್ಕಾಗಿಯೇ ಪ್ರತ್ಯೇಕ ಕೊಠಡಿ ತೆರೆಯಲಾಗಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.