ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುವೆಂಪು ನಗರ ವಾರ್ಡ್‌: 20 ಮಂದಿಗೆ ಕೋವಿಡ್

Last Updated 30 ಜುಲೈ 2021, 19:30 IST
ಅಕ್ಷರ ಗಾತ್ರ

ಬೆಂಗಳೂರು: ಯಲಹಂಕ ವಲಯ ವ್ಯಾಪ್ತಿಯ ಕುವೆಂಪುನಗರ ವಾರ್ಡ್ ವ್ಯಾಪ್ತಿಯಲ್ಲಿ ಬಿಬಿಎಂಪಿ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತರು ಕೋವಿಡ್‌ ಲಸಿಕೆಗೆ ಸಂಬಂಧಿಸಿದಂತೆ ಮನೆ ಮನೆ ಸಮೀಕ್ಷೆ ನಡೆಸಿದರು.

ವಾರ್ಡ್‌ನ ಸಿಂಗಾಪುರ, ಶ್ರೀನಿಧಿ ಹಾಗೂ ಸೋಮಣ್ಣ ಬಡಾವಣೆಗಳಲ್ಲಿ ಜನರಿಗೆ ಕೋವಿಡ್ ಪರೀಕ್ಷೆಯನ್ನೂ ನಡೆಸಲಾಯಿತು. ಪರೀಕ್ಷೆಗೆ ಒಳಪಟ್ಟವರ ಪೈಕಿ 20 ಜನರಿಗೆ ಸೋಂಕು ತಗುಲಿರುವುದು ದೃಢ‍ಪಟ್ಟಿತು. ಸೋಂಕಿತರ ಪ್ರಥಮ ಮತ್ತು ದ್ವಿತೀಯ ಸಂಪರ್ಕಿತರನ್ನೂ ಪರೀಕ್ಷೆಗೆ ಒಳಪಡಿಸಲಾಯಿತು.

ಸೋಂಕಿನ ಲಕ್ಷಣಗಳ ಬಗ್ಗೆ ಮತ್ತು ಅದಕ್ಕೆ ತೆಗೆದುಕೊಳ್ಳಬಹುದಾದ ಚಿಕಿತ್ಸೆ ಹಾಗೂ ಕ್ರಮಗಳ ಕುರಿತು ಜನರಲ್ಲಿ ಅರಿವು ಮೂಡಿಸಲಾಯಿತು.

‘ಸೋಂಕು ದೃಢಪಟ್ಟಿರುವವರ ಮನೆಗಳನ್ನು ಸೀಲ್‌ ಮಾಡಲಾಗಿದೆ. ವಾರ್ಡ್‌ನ ಬಡಾವಣೆಗಳಲ್ಲಿ ಸೋಂಕು ಮುಕ್ತ ದ್ರಾವಣ ಸಿಂಪಡಿಸಲಾಗುತ್ತಿದೆ. ಈ ಪ್ರದೇಶಗಳಲ್ಲಿ ಹೆಚ್ಚು ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದೆ. ಅಲ್ಲದೆ, ಜನರಲ್ಲಿ ಅರಿವು ಮೂಡಿಸಲು ಆಟೊ ಮೂಲಕ ಪ್ರಚಾರ ಮಾಡಲಾಗುತ್ತಿದೆ’ ಎಂದು ಬಿಬಿಎಂಪಿ ಉಪ ಆರೋಗ್ಯಾಧಿಕಾರಿ ಡಾ. ಕಲ್ಪನಾ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT