ಬೆಂಗಳೂರು:ವಿದೇಶಗಳಿಂದ ಇಲ್ಲಿಗೆ ಬರುವ ಪ್ರಯಾಣಿಕರು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಯ ನೆಗೆಟಿವ್ ವರದಿ ಹಾಗೂ ಲಸಿಕೆ ಪಡೆದಿರುವ ಬಗ್ಗೆ ಪ್ರಮಾಣಪತ್ರ ಹೊಂದಿರಬೇಕು ಎಂದು ಆರೋಗ್ಯ ಇಲಾಖೆ ಸೂಚಿಸಿದೆ.

ಕೆಲ ದೇಶಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿರುವುದರಿಂದ ವಿದೇಶಿ ಪ್ರಯಾಣಿಕರಿಗೆ ಇಲಾಖೆಯು ಪರಿಷ್ಕೃತ ಮಾರ್ಗಸೂಚಿಯನ್ನು ಹೊರಡಿಸಿದೆ.

ಇಂಗ್ಲೆಂಡ್, ಯುರೋಪ್, ಮಧ್ಯಪ್ರಾಚ್ಯ,ದಕ್ಷಿಣ ಆಫ್ರಿಕಾ, ಬ್ರೆಜಿಲ್, ಬಾಂಗ್ಲಾದೇಶ, ಬೋಟ್ಸವಾನಾ, ಚೀನಾ, ಮಾರಿಷಸ್, ನ್ಯೂಜಿಲೆಂಡ್, ಜಿಂಬಾಬ್ವೆದೇಶಗಳಿಂದ ಬರುವವರು ಸೋಂಕಿತರಾಗಿಲ್ಲ ಎನ್ನುವುದರ ಬಗ್ಗೆ ಆರ್‌ಟಿ–ಪಿಸಿಆರ್ ಪರೀಕ್ಷಾ ವರದಿ ಹೊಂದಿರಬೇಕು. ಆ ವರದಿಯುಪ್ರಯಾಣದ ಮೊದಲಿನ 72 ಗಂಟೆಗಳ ಅವಧಿಯದ್ದಾಗಿರಬೇಕು.ಕೋವಿಡ್ ರೂಪಾಂತರ ತಳಿಗಳು ಪತ್ತೆ ಮತ್ತು ಸೋಂಕು ಹೆಚ್ಚುತ್ತಿರುವುದರಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ’ ಎಂದು ಇಲಾಖೆ ತಿಳಿಸಿದೆ.

‘ಪ್ರಯಾಣಕ್ಕೂ ಮೊದಲು ಸೇವಾಸಿಂಧು ಪೋರ್ಟಲ್‌ನಲ್ಲಿ ಸೋಂಕಿತರಾಗಿಲ್ಲ ಎನ್ನುವುದರ ಬಗ್ಗೆ ಪರೀಕ್ಷಾ ವರದಿಯನ್ನು ಅಪ್‌ಲೋಡ್ ಮಾಡಬೇಕು. ಪ್ರಯಾಣಿಕರ ಗಂಟಲು ದ್ರವ ಮಾದರಿಯನ್ನು ರಾಜ್ಯದ ಎಲ್ಲ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ, ಬಂದರುಗಳ ಪ್ರವೇಶದ್ವಾರದ ಬಳಿ ಪಡೆಯಬೇಕು’ ಎಂದು ಹೇಳಲಾಗಿದೆ.

‘ಲಸಿಕೆ ಪ್ರಮಾಣಪತ್ರದ ವಿಚಾರವಾಗಿ ದೇಶದೊಂದಿಗೆ ಒಪ್ಪಂದ ಮಾಡಿಕೊಂಡಿರುವ ಬ್ರಿಟನ್, ಫ್ರಾನ್ಸ್, ಜರ್ಮನಿ, ನೇಪಾಳ, ಬೆಲಾರಸ್, ಲೆಬನಾನ್, ಅರ್ಮೇನಿಯಾ, ಉಕ್ರೇನ್, ಬೆಲ್ಜಿಯಂ, ಹಂಗೇರಿ ಹಾಗೂ ಸರ್ಬಿಯಾ ದೇಶದಿಂದ ಇಲ್ಲಿಗೆ ಬಂದವರಿಗೆ ಪರೀಕ್ಷೆ ಇಲ್ಲದೆಯೇ ತೆರಳಲು ಅವಕಾಶ ಇರಲಿದೆ. ಆದರೆ, ಅವರು 14 ದಿನಗಳು ಮನೆಯಲ್ಲಿಯೇ ನಿಗಾ ವ್ಯವಸ್ಥೆಗೆ ಒಳಪಡಬೇಕು’ ಎಂದು ಸೂಚಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.