ಭಾನುವಾರ, ಆಗಸ್ಟ್ 9, 2020
24 °C
ವ್ಯವಸ್ಥೆಯ ಬಗ್ಗೆ ಅಧಿಕಾರಿಗಳಿಂದ ಪರಿಶೀಲನೆ

ಕೋವಿಡ್‌: ಮನೆಯಲ್ಲಿಯೇ ಆರೈಕೆಗೆ ಅವಕಾಶ, ಸರ್ಕಾರದಿಂದ ಹೊಸ ಮಾರ್ಗಸೂಚಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸೋಂಕು ಲಕ್ಷಣಗಳು ಬಹಿರಂಗವಾಗಿ ಗೋಚರಿಸದ ರೋಗಿಗಳಿಗೆ ಮನೆಯಲ್ಲಿಯೇ ಚಿಕಿತ್ಸೆ ಒದಗಿಸಲು ನಿರ್ಧರಿಸಿರುವ ರಾಜ್ಯ ಸರ್ಕಾರ, ಈ ಸಂಬಂಧ ಮಾರ್ಗಸೂಚಿ ಬಿಡುಗಡೆ ಮಾಡಿದೆ. ‌

ರಾಜ್ಯದಲ್ಲಿ ಕೋವಿಡ್‌ ಪೀಡಿತರ ಸಂಖ್ಯೆ ಹೆಚ್ಚಿದ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಸಮಸ್ಯೆ ತಲೆದೋರಿದೆ. ಇದರಿಂದಾಗಿ ಗಂಭೀರವಾಗಿ ಅಸ್ವಸ್ಥಗೊಂಡ ರೋಗಿಗಳಿಗೆ ಚಿಕಿತ್ಸೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇರಲಿದೆ ಎಂಬ ಕಾರಣಕ್ಕೆ ಮನೆಯಲ್ಲೇ ಚಿಕಿತ್ಸೆಗೆ ಆದ್ಯತೆ ನೀಡಲಾಗಿದೆ. ಈ ಮಾದರಿಯ ಆರೈಕೆಗೆ ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ತು (ಐಸಿಎಂಆರ್) ಅನುಮೋದನೆ ನೀಡಿದೆ. 

ಯಾರಿಗೆ ಮನೆಯಲ್ಲಿ ಚಿಕಿತ್ಸೆ?

*ಕೊರೊನಾ ಸೋಂಕಿನ ಲಕ್ಷಣಗಳು ಬಹಿರಂಗವಾಗಿ ಗೋಚರಿಸದ ಹಾಗೂ ಪ್ರಾರಂಭಿಕ ಹಂತದ ಲಕ್ಷಣಗಳು ಕಾಣಿಸಿಕೊಂಡವರಿಗೆ 

*ಮನೆಯಲ್ಲಿ ಪ್ರತ್ಯೇಕವಾಗಿ ಇರಲು ಅಗತ್ಯ ವ್ಯವಸ್ಥೆ ಇರಬೇಕು

*ಜಿಲ್ಲಾ ಆರೋಗ್ಯ ಪ್ರಾಧಿಕಾರ ಅಥವಾ ಬಿಬಿಎಂಪಿಯ ಆರೋಗ್ಯ ತಂಡವು ಮನೆಗೆ ಭೇಟಿ ನೀಡಿ, ವ್ಯವಸ್ಥೆ ಪರಿಶೀಲಿಸುತ್ತದೆ

*ಆರೈಕೆ ವಿಧಾನದ ಬಗೆಗಿನ ಮಾಹಿತಿಯನ್ನು ಟೆಲಿ ಕನ್ಸಲ್ಟೇಶನ್ ಮೂಲಕ ಪಡೆದುಕೊಳ್ಳಬೇಕು

*ಆರೋಗ್ಯದ ಸ್ಥಿತಿಗತಿಯ ಬಗ್ಗೆ ಪ್ರತಿನಿತ್ಯ ವೈದ್ಯರು ಹಾಗೂ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು

*ಆಕ್ಸಿಮೀಟರ್, ಡಿಜಿಟಲ್ ಥರ್ಮಾಮೀಟರ್ ಹಾಗೂ ವೈಯಕ್ತಿಕ ರಕ್ಷಣಾ ಸಾಧನಗಳನ್ನು ಹೊಂದಿರಬೇಕು

*ಮನೆ ಐಸೋಲೇಷನ್ ನಿಯಮಗಳನ್ನು ಕುಟುಂಬದ ಸದಸ್ಯರು ಕೂಡ ತಿಳಿದಿರಬೇಕು

*ಉತ್ತಮವಾಗಿ ಗಾಳಿ ಬೆಳಕು ಇರುವ ಕೊಠಡಿ ಹಾಗೂ ಪ್ರತ್ಯೇಕ ಶೌಚಾಲಯ ಇರಬೇಕು

*ಮನೆಯ ಆರೈಕೆಗೆ ಒಳಗಾದ ವ್ಯಕ್ತಿಯ ಕೈಗೆ ಟ್ಯಾಗ್ ಅಳವಡಿಕೆ ಮಾಡಲಾಗುತ್ತದೆ. ಮನೆಯ ಪ್ರವೇಶ ದ್ವಾರಕ್ಕೆ ಭಿತ್ತಿ ಪತ್ರ ಅಂಟಿಸಲಾಗುತ್ತದೆ. 

ಯಾರಿಗೆ ಅವಕಾಶವಿಲ್ಲ?
50 ವರ್ಷ ಮೇಲ್ಪಟ್ಟವರು, ಮಧುಮೇಹ, ಅಧಿಕ ರಕ್ತದೊತ್ತಡ, ಎಚ್‌ಐವಿ, ಕ್ಯಾನ್ಸರ್, ಹೃದಯ ಕಾಯಿಲೆ ಸೇರಿದಂತೆ ವಿವಿಧ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರಿಗೆ ಮನೆಯ ಆರೈಕೆ ಅಪಾಯ. ಹಾಗಾಗಿ ಅಂತಹವರನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳಲಾಗುತ್ತದೆ. ಮನೆ ಆರೈಕೆ ಅವಧಿಯಲ್ಲಿ ವ್ಯಕ್ತಿಗಳ ಆರೋಗ್ಯ ಸ್ಥಿತಿ ಹದಗೆಟ್ಟಲ್ಲಿ ಕೂಡಲೇ ಆಸ್ಪತ್ರೆ ಸಂಪರ್ಕಿಸಬೇಕು.

ಕುಟುಂಬದ ಸದಸ್ಯರಿಗೆ ಸೂಚನೆಗಳು

* ಭಯ, ಆತಂಕಕ್ಕೆ ಒಳಗಾಗಬಾರದು‌

* ವ್ಯಕ್ತಿಯಲ್ಲಿ ಸಕಾರಾತ್ಮಕ ಚಿಂತನೆಗಳು ಮೂಡುವಂತೆ ನೋಡಿಕೊಳ್ಳಬೇಕು

* ಕನಿಷ್ಠ ಆರು ಅಡಿಗಳಷ್ಟು ಅಂತರ ಕಾಯ್ದುಕೊಳ್ಳಬೇಕು

* ಹೊರಗಿನವರಿಗೆ ಪ್ರವೇಶಕ್ಕೆ ಅವಕಾಶ ನೀಡಬಾರದು

* ನೆರೆಹೊರೆಯವರ ಸಹಕಾರದಿಂದ ಅಗತ್ಯ ವಸ್ತುಗಳನ್ನು ತರಿಸಿಕೊಳ್ಳಬೇಕು

* ಗೊಂದಲ ಉಂಟಾದಲ್ಲಿ ಅಥವಾ ಮಾಹಿತಿಗೆ ಸಹಾಯವಾಣಿ ಸಂಖ್ಯೆ 14410ಕ್ಕೆ ಸಂಪರ್ಕಿಸಿ

ಏನೇನು ಮುಂಜಾಗ್ರತೆ
* ರೋಗಿ ಮಾಸ್ಕ್‌ ಧರಿಸುವ ಜತೆಗೆ ಅಗತ್ಯ ಮುಂಜಾಗ್ರತೆ ವಹಿಸಬೇಕು

* ಮುಖಗವಸು ಒದ್ದೆಯಾಗಿದ್ದರೆ ಅಥವಾ ಕೊಳೆಯಾಗಿದ್ದರೆ ಬದಲಾಯಿಸಬೇಕು

* ಮನೆಯ ಬೇರೆ ಸದಸ್ಯರ ಟವೆಲ್, ವಸ್ತುಗಳನ್ನು ಸ್ಪರ್ಶಿಸಬಾರದು

* ರೋಗಿಯ ಕೊಠಡಿಗೆ ಆಹಾರ ಒದಗಿಸಬೇಕು

* ರೋಗಿ ಬಳಸಿದ ಪಾತ್ರೆಗಳು ಹಾಗೂ ವಸ್ತುಗಳನ್ನು ಇನ್ನೊಬ್ಬರು ಬಳಸಬಾರದು

ಎಷ್ಟು ದಿನ ಆರೈಕೆ?
* ಮನೆ ಆರೈಕೆ ವೇಳೆ ದೇಹದ ಉಷ್ಣಾಂಶ ನಿಯಂತ್ರಣಕ್ಕೆ ಬರಬೇಕು‌

* 10 ದಿನಗಳ ಬಳಿಕ ವ್ಯಕ್ತಿಯ ಆರೋಗ್ಯದಲ್ಲಿ ಚೇತರಿಕೆಯಾಗಿದ್ದಲ್ಲಿ ಕೋವಿಡ್ ಪರೀಕ್ಷೆಗೆ ಸಂಪರ್ಕಿಸಬೇಕು‌

* ವ್ಯಕ್ತಿ ಗುಣಮುಖರಾಗಿರುವುದು ಖಚಿತವಾದ ಬಳಿಕ ಕೊಠಡಿಯನ್ನು ಸೋಂಕು ನಿವಾರಕದಿಂದ ಸ್ವಚ್ಛಗೊಳಿಸಬೇಕು

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು