ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಲಸಿಕೆ ಮೊದಲ ಡೋಸ್‌: ಬೆಂಗಳೂರು ನಗರ ಜಿಲ್ಲೆ ಶೇ 100 ಸಾಧನೆ

Last Updated 30 ಆಗಸ್ಟ್ 2021, 11:14 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್ ಲಸಿಕೆಯ ಮೊದಲ ಡೋಸ್‌ ವಿತರಣೆಯಲ್ಲಿ ಬೆಂಗಳೂರು ನಗರ ಜಿಲ್ಲೆ (ಬಿಬಿಎಂಪಿ ಹೊರತುಪಡಿಸಿ) ಶೇ 100 ಸಾಧನೆ ಮಾಡಿದೆ.

ಬೆಂಗಳೂರು ನಗರ ಜಿಲ್ಲಾಡಳಿತವು ಈ ವರ್ಷದ ಆಗಸ್ಟ್‌ ಅಂತ್ಯದವರೆಗೆ 10.6 ಲಕ್ಷ ಮಂದಿಗೆ ಲಸಿಕೆ ನೀಡಬೇಕಾಗಿತ್ತು. ಶನಿವಾರ 10.6 ಲಕ್ಷ ಮಂದಿಗೆ ಲಸಿಕೆಯ ಮೊದಲ ಡೋಸ್‌ ನೀಡಲಾಗಿದೆ. ಈ ಸಾಧನೆಯೊಂದಿಗೆ ಜಿಲ್ಲೆಯ ಒಟ್ಟು ಜನಸಂಖ್ಯೆಯ (ಬಿಬಿಎಂಪಿ ಹೊರತಾಗಿ) ಶೇ 80ರಷ್ಟು ಮಂದಿಗೆ ಲಸಿಕೆ ನೀಡಿದಂತಾಗಿದೆ. ಜಿಲ್ಲೆಯ ವ್ಯಾಪ್ತಿಯಲ್ಲಿ 2.97 ಲಕ್ಷ ಮಂದಿ ಲಸಿಕೆಯ ಎರಡನೇ ಡೋಸ್‌ ಅನ್ನೂ ಪಡೆದಿದ್ದಾರೆ ಎಂದು ಜಿಲ್ಲಾಡಳಿತದ ಮೂಲಗಳು ತಿಳಿಸಿವೆ.

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಬೆಂಗಳೂರು ನಗರ ಜಿಲ್ಲೆಯಲ್ಲೇ ಇದ್ದರೂ ಲಸಿಕೆ ವಿತರಣೆ ಕುರಿತು ಅದರ ಅಂಕಿ ಅಂಶಗಳನ್ನು ಪ್ರತ್ಯೇಕವಾಗಿ ಪರಿಗಣಿಸಲಾಗುತ್ತದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 94.42 ಲಕ್ಷ ಮಂದಿಗೆ ಲಸಿಕೆ ನೀಡುವ ಗುರಿ ಇಟ್ಟುಕೊಳ್ಳಲಾಗಿದ್ದು, ಇದುವರೆಗೆ 67.29 ಲಕ್ಷ ಮಂದಿ (ಶೇ 71ರಷ್ಟು) ಲಸಿಕೆಯ ಮೊದಲ ಡೋಸ್‌ ಪಡೆದಿದ್ದಾರೆ. 24.40 ಲಕ್ಷ ಮಂದಿ ಲಸಿಕೆಯ ಎರಡನೇ ಡೋಸ್‌ ಪಡೆದಿದ್ದಾರೆ. ಲಸಿಕೆ ವಿತರಣೆಯಲ್ಲಿ ಬಿಬಿಎಂಪಿ ರಾಜ್ಯದಲ್ಲಿ ನಾಲ್ಕನೇ ಸ್ಥಾನದಲ್ಲಿದೆ.

ಲಸಿಕೆ ನೀಡುವಿಕೆಯಲ್ಲಿ ಕೊಡಗು ಜಿಲ್ಲೆ (ಶೇ 75) ಎರಡನೇ ಸ್ಥಾನದಲ್ಲಿ ಹಾಗೂ ಉಡುಪಿ ಜಿಲ್ಲೆ (ಶೇ 72) ಮೂರನೇ ಸ್ಥಾನದಲ್ಲಿ ಹಾಗೂ ರಾಮನಗರ ಜಿಲ್ಲೆ (ಶೇ 69) ಐದನೇ ಸ್ಥಾನದಲ್ಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT