ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್: ಮಗುವಿನ ಆರೈಕೆಗೆ ಹೆಚ್ಚಿನ ಆದ್ಯತೆ

ಸೂಕ್ತ ಆಹಾರ ಪದ್ಧತಿ ಅಳವಡಿಸಿಕೊಳ್ಳಲು ಆರೋಗ್ಯ ಇಲಾಖೆ ಸೂಚನೆ
Last Updated 5 ಆಗಸ್ಟ್ 2020, 23:38 IST
ಅಕ್ಷರ ಗಾತ್ರ

ಬೆಂಗಳೂರು: ಕೊರೊನಾ ಸೋಂಕು ಹಬ್ಬುತ್ತಿರುವ ಸಂದರ್ಭದಲ್ಲಿ ನವಜಾತ ಶಿಶುಗಳ ಆರೈಕೆಗೆ ಹೆಚ್ಚಿನ ಆದ್ಯತೆ ನೀಡುವ ಜತೆಗೆ ಸೂಕ್ತ ಆಹಾರ ಪದ್ಧತಿ ರೂಢಿಸಿಕೊಳ್ಳಬೇಕು ಎಂದು ಆರೋಗ್ಯ ಇಲಾಖೆ ಸೂಚಿಸಿದೆ.

ಸ್ತನಪಾನವು ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಹೆಚ್ಚು ಪರಿಣಾಮಕಾರಿ. ಮಗು ಹುಟ್ಟಿದ ಒಂದು ಗಂಟೆಯೊಳಗೆ ಹಾಲುಣಿಸಲು ಪ್ರಾರಂಭಿಸಿ, ಆರು ತಿಂಗಳವರೆಗೆ ಎದೆ ಹಾಲನ್ನು ಮಾತ್ರ ನೀಡಬೇಕು. ತಾಯಿಗೆ ಜ್ವರ, ಕೆಮ್ಮಿನ ಲಕ್ಷಣಗಳು ಕಾಣಿಸಿಕೊಂಡಲ್ಲಿ ಅಥವಾ ಉಸಿರಾಟದ ಸಮಸ್ಯೆ ಉಂಟಾದಲ್ಲಿ ಮುನ್ನೆಚ್ಚರಿಕೆ ಕ್ರಮ ಅನುಸರಿಸಿ, ವೈದ್ಯಕೀಯ ನೆರವು
ಪಡೆಯಬೇಕು. ಒಂದು ವೇಳೆ ತಾಯಿ ಕೋವಿಡ್ ಪೀಡಿತರಾದರೂ ಮುಖಗವಸು ಧರಿಸುವ ಜತೆಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ, ಮಗುವಿಗೆ ಸ್ತನಪಾನ ಮಾಡಿಸಬಹುದು ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಶಿಶುಗಳು ಸೋಂಕಿತರಾಗಿದ್ದಲ್ಲಿ ಅಥವಾ ಸೋಂಕಿನ ಲಕ್ಷಣಗಳಿಂದ ಬಳಲುತ್ತಿದ್ದರೂ ಸ್ತನಪಾನ ನಿಲ್ಲಿಸಬಾರದು. ಇತರೆ ಕಾಯಿಲೆಗೆ ಒಳಗಾದರೂ ವೈಯಕ್ತಿಕ ಶುಚಿತ್ವ ಅಭ್ಯಾಸದೊಂದಿಗೆ ತಾಯಂದಿರು ಎದೆಹಾಲನ್ನು ತಪ್ಪದೇ ನೀಡಬೇಕು ಎಂದು ಸೂಚಿಸಿದೆ.

ಆರು ತಿಂಗಳ ಬಳಿಕ ಅನುಸರಿಸಬೇಕಾದ ಸೂಚನೆಗಳು:

*ಎದೆಹಾಲಿನ ಜತೆಗೆ ಪೂರಕ ಆಹಾರ ಒದಗಿಸಬೇಕು

*ಅಧಿಕ ಪ್ರಮಾಣದಲ್ಲಿ ಕೊಬ್ಬು, ಸಕ್ಕರೆ, ಉಪ್ಪು ಇರುವ ಆಹಾರಗಳ ಸೇವನೆಯನ್ನು ಮಿತಗೊಳಿಸಬೇಕು

*ಆಹಾರ ತಯಾರಿಸುವಾಗ, ಬಡಿಸುವಾಗ ಕೈ ಸ್ವಚ್ಛಮಾಡಿಕೊಳ್ಳಬೇಕು

*ಆಹಾರ ನೀಡುವ ಮೊದಲು ಮಗುವಿನ ಕೈ ಸ್ವಚ್ಚಪಡಿಸಬೇಕು

*ಮಕ್ಕಳು ಅನಾರೋಗ್ಯಕ್ಕೆ ಒಳಗಾದರೂ ಸಾಮಾನ್ಯವಾಗಿ ನೀಡುವಷ್ಟು ಆಹಾರವನ್ನೇ ಒದಗಿಸಬೇಕು

*ಪೂರಕ ಆಹಾರವನ್ನು ವಿಳಂಬ ಮಾಡಿದಲ್ಲಿ ಮಗುವಿನ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಯ ಮೇಲೆ ‍ಪರಿಣಾಮ ಬೀರಿ, ಅಪೌಷ್ಟಿಕತೆಗೆ ಒಳಗಾಗುವ ಸಾಧ್ಯತೆ ಇರುತ್ತದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT