ಬೆಂಗಳೂರು: ನಗರದಲ್ಲಿ ಶನಿವಾರ 2,665 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 72 ಸಾವಿರ ದಾಟಿದೆ.

ಕೊವಿಡ್ ಪೀಡಿತರಲ್ಲಿ ಮತ್ತೆ 18 ಮಂದಿ ಮೃತಪಟ್ಟಿರುವುದು ದೃಢಪಟ್ಟಿದ್ದು, ಸೋಂಕಿಗೆ ಈವರೆಗೆ ಸಾವಿಗೀಡಾದವರ ಸಂಖ್ಯೆ 1,218ಕ್ಕೆ ಏರಿಕೆಯಾಗಿದೆ. ಇನ್ನೊಂದೆಡೆ ಕೋವಿಡ್ ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಳ ಮಾಡಿದ ಪರಿಣಾಮ ಸೋಂಕಿತರ ಸಂಖ್ಯೆ ಏರಿಕೆ ಕಾಣುತ್ತಿದೆ.

ಕೇವಲ 48 ಗಂಟೆಗಳಲ್ಲಿ 5,209 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಚೇತರಿಸಿಕೊಳ್ಳುವವರ ಸಂಖ್ಯೆ ಕೂಡ ಹೆಚ್ಚುತ್ತಿದ್ದು, ಸೋಂಕಿತರಲ್ಲಿ2,229 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಈವರೆಗೆ 37 ಸಾವಿರಕ್ಕೂ ಅಧಿಕ ಮಂದಿ ಚೇತರಿಸಿಕೊಂಡಿದ್ದು, 33 ಸಾವಿರಕ್ಕೂ ಅಧಿಕ ಮಂದಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೊಸದಾಗಿ ವರದಿಯಾದ ಪ್ರಕರಣಗಳಲ್ಲಿಪಶ್ಚಿಮ ವಲಯದಲ್ಲಿಯೇ ಅಧಿಕ ಮಂದಿ (643) ಸೋಂಕಿತರಾಗಿದ್ದಾರೆ. ಪೂರ್ವ ವಲಯದಲ್ಲಿ 354, ದಕ್ಷಿಣ ವಲಯದಲ್ಲಿ 378, ಬೊಮ್ಮನಹಳ್ಳಿಯಲ್ಲಿ 322, ಮಹದೇವಪುರದಲ್ಲಿ 151, ಆರ್.ಆರ್.ನಗರದಲ್ಲಿ 210, ಯಲಹಂಕದಲ್ಲಿ89 ಹಾಗೂ ದಾಸರಹಳ್ಳಿಯಲ್ಲಿ68 ಮಂದಿಗೆ ಸೋಂಕು ತಗುಲಿದೆ. 10 ದಿನಗಳಿಂದ ಪಶ್ಚಿಮ ವಲಯದಲ್ಲಿ ಪ್ರಕರಣಗಳು ಹೆಚ್ಚುತ್ತಿದ್ದು, ಈ ಅವಧಿಯಲ್ಲಿ ನಗರದಲ್ಲಿ ಸೋಂಕಿತರಾದವರಲ್ಲಿ ಶೇ25 ರಷ್ಟು ಮಂದಿ ಆ ಭಾಗಕ್ಕೆ ಸೇರಿದವರು. ಬೆಂಗಳೂರು ದಕ್ಷಿಣದಲ್ಲಿ ಶೇ 18 ರಷ್ಟು ಪ್ರಕರಣಗಳು ವರದಿಯಾಗಿವೆ.

ಶನಿವಾರ ದೃಢಪಟ್ಟ ಮರಣ ಪ್ರಕರಣಗಳಲ್ಲಿ 21 ವರ್ಷದ ಯುವಕ ಕೂಡ ಸೇರಿದ್ದಾನೆ. 16 ಮಂದಿ 50 ವರ್ಷ ಮೇಲ್ಪಟ್ಟವರಾಗಿದ್ದು, ಮಧುಮೇಹ, ಅಧಿಕ ರಕ್ತದೊತ್ತಡ ಸೇರಿದಂತೆ ವಿವಿಧ ಕಾಯಿಲೆಗಳನ್ನು ಹೊಂದಿದ್ದರು. 328 ರೋಗಿಗಳಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ.ನಗರದ ಜ್ವರ ಚಿಕಿತ್ಸಾಲಯಗಳಲ್ಲಿ ಒಂದೇ ದಿನ 3,761 ಮಂದಿಯನ್ನು ತಪಾಸಣೆ ಮಾಡಲಾಗಿದೆ. ಅಲ್ಲಿ ಈವರೆಗೆ ಒಟ್ಟು 77,733 ಮಂದಿಯನ್ನು ಪರೀಕ್ಷೆ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.