ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ಸೋಂಕು ತಡೆ ನಿಯಮ ಉಲ್ಲಂಘನೆ: 1058 ಪ್ರಕರಣ, 26 ಮಳಿಗೆ ಬಂದ್

Last Updated 9 ಏಪ್ರಿಲ್ 2021, 16:33 IST
ಅಕ್ಷರ ಗಾತ್ರ

ಬೆಂಗಳೂರು: ಕೊರೊನಾ ಸೋಂಕು ತಡೆಗೆ ರಾಜ್ಯ ಸರ್ಕಾರ ರೂಪಿಸಿರುವ ನಿಯಮ ಉಲ್ಲಂಘಿಸಿದ್ದವರ ವಿರುದ್ಧ ಕಾರ್ಯಾಚರಣೆ ನಡೆಸಿರುವ ಪೂರ್ವ ವಿಭಾಗದ ಪೊಲೀಸರು 1058 ಪ್ರಕರಣ ದಾಖಲಿಸಿಕೊಂಡಿದ್ದಾರೆ. 26 ವಾಣಿಜ್ಯ ಮಳಿಗೆಗಳನ್ನೂ ಬಂದ್ ಮಾಡಿಸಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಕೈಗೊಳ್ಳಬೇಕಾದ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಮಾಸ್ಕ್‌ ಧರಿಸುವುದು ಹಾಗೂ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ. ಅಷ್ಟಾದರೂ ಹಲವರು, ನಿಯಮ ಉಲ್ಲಂಘಿಸುತ್ತಿರುವುದು ಹೆಚ್ಚಾಗಿತ್ತು. ಇದರ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ.

’48 ಗಂಟೆಗಳ ಕಾರ್ಯಾಚರಣೆಯಲ್ಲಿ 1058 ಪ್ರಕರಣ ದಾಖಲಿಸಿಕೊಂಡು, ತಪ್ಪಿತಸ್ಥರಿಂದ ₹ 2.64 ಲಕ್ಷ ದಂಡ ಸಂಗ್ರಹಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ವಾಣಿಜ್ಯ ಮಳಿಗೆಗಳಿಗೂ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಮಾರ್ಗಸೂಚಿಗಳನ್ನು ಪಾಲಿಸದ 26 ವಾಣಿಜ್ಯ ಮಳಿಗೆಗಳನ್ನು ಮುಚ್ಚಿಸಿ, ನೋಟಿಸ್ ನೀಡಲಾಗಿದೆ’ ಎಂದೂ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT