ಭಾನುವಾರ, ಆಗಸ್ಟ್ 1, 2021
27 °C
ಹಿರಿಯ ಅಧಿಕಾರಿಗಳಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ಸಲಹೆ

ಸೋಂಕಿತರ ಸಂಪರ್ಕ ಪತ್ತೆಗೆ ಬೂತ್‌ಮಟ್ಟದ ಕಾರ್ಯಪಡೆ ಬಳಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌

ಬೆಂಗಳೂರು: ಲಾಕ್‌ಡೌನ್‌ ಅವಧಿಯಲ್ಲಿ ಬೆಂಗಳೂರು ನಗರದಲ್ಲಿ ಸೋಂಕಿತರ ಸಂಪರ್ಕ ಪತ್ತೆಗೆ ಬೂತ್ ಮಟ್ಟದ ಕಾರ್ಯಪಡೆ ಸಮಿತಿಗಳನ್ನು ಬಳಸಿಕೊಳ್ಳುವಂತೆ ಹಿರಿಯ ಅಧಿಕಾರಿಗಳಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಸೂಚನೆ ನೀಡಿದರು.

ಕೋವಿಡ್ ನಿಯಂತ್ರಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಅಧಿಕಾರಿಗಳ ಜೊತೆ ಸಚಿವರು ಭಾನುವಾರ ವಿಡಿಯೊ ಸಂವಾದ ನಡೆಸಿದರು.

‘ಬೆಂಗಳೂರು ನಗರದಲ್ಲಿ ಹಾಸಿಗೆಗಳ ಹಂಚಿಕೆಗೆ ಸಮರ್ಪಕ ಕೇಂದ್ರೀಕೃತ ವ್ಯವಸ್ಥೆ ಕಲ್ಪಿಸಬೇಕು. ಸೋಂಕು ದೃಢಪಟ್ಟವರಿಗೆ ಮತ್ತು ಸೋಂಕಿತರ ಪ್ರಾಥಮಿಕ ಸಂಪರ್ಕಗಳಿಗೆ ಮಾಹಿತಿ ನೀಡಲು, ರೋಗಲಕ್ಷಣ ಇರುವ ಸೋಂಕಿತರ ಪತ್ತೆ, ರೋಗಲಕ್ಷಣ ಇಲ್ಲದ ಸೋಂಕಿತರಿಗೆ ಕೋವಿಡ್ ಆರೈಕೆ ಕೇಂದ್ರ ಮತ್ತು ರೋಗ ಲಕ್ಷಣವಿದ್ದವರಿಗೆ ಆಸ್ಪತ್ರೆ, ಆಂಬುಲೆನ್ಸ್‌ ಸಂಯೋಜನೆ ಸೇರಿದಂತೆ ತುರ್ತು ಸಂದರ್ಭಗಳಲ್ಲಿ ಜನರ ಅಗತ್ಯಕ್ಕೆ ಸಹಾಯವಾಣಿ ವ್ಯವಸ್ಥೆ ಕಲ್ಪಿಸಬೇಕು’ ಅವರು ಸಲಹೆ ನೀಡಿದರು.

‘ರಾಪಿಡ್ ಆಂಟಿಜೆನ್ ಟೆಸ್ಟ್ ಅವಶ್ಯಕತೆ ಇರುವ ಕ್ಲಸ್ಟರ್‌ಗಳನ್ನು ಗುರುತಿಸುವ ಜೊತೆಗೆ, ರೋಗಿಗಳನ್ನು ದಾಖಲಿಸಿಕೊಳ್ಳಲು ಇರುವ ಗೊಂದಲ ನಿವಾರಿಸಲು ಆಸ್ಪತ್ರೆಗಳಲ್ಲಿ ಆಂಟಿಜೆನ್ ಟೆಸ್ಟ್ ವ್ಯವಸ್ಥೆ ಕಲ್ಪಿಸಬೇಕು. ಆರ್‌ಟಿ–ಪಿಸಿಆರ್ ಪರೀಕ್ಷೆಯ ಮಾದರಿಗಳನ್ನು ಸರ್ಕಾರಿ ಮತ್ತು ಖಾಸಗಿ ಪ್ರಯೋಗಾಲಯಗಳಿಗೆ ಸಮರ್ಪಕವಾಗಿ ಹಂಚುವ ಮೂಲಕ ವರದಿ ವಿಳಂಬ ಆಗದಂತೆ ಕ್ರಮ ಕೈಗೊಳ್ಳಬೇಕು’ ಎಂದೂ ಅವರು ಹೇಳಿದರು.

‘ಆಂಬುಲೆನ್ಸ್ ಲಭ್ಯತೆ ಹೆಚ್ಚಿಸುವುದು ಮತ್ತು ರಾಪಿಡ್ ಆಂಟಿಜೆನ್ ಟೆಸ್ಟ್‌ಗಾಗಿ ಸಂಚಾರಿ ತಪಾಸಣಾ ವಾಹನ ಸಜ್ಜುಗೊಳಿಸಬೇಕು’ ಎಂದೂ ಸಚಿವರು ಸಲಹೆ ನೀಡಿದರು.

ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಾದ ಜಾವೇದ್ ಅಕ್ತರ್, ಶಾಲಿನಿ ರಜನೀಶ್, ಎಲ್.ಎ. ಆತೀಕ್, ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್ ಕುಮಾರ್, ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್, ಆರೋಗ್ಯ ಇಲಾಖೆ ಆಯುಕ್ತ ಪಂಕಜ್ ಪಾಂಡೆ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು