ಶನಿವಾರ, ನವೆಂಬರ್ 28, 2020
26 °C
ಸರ್ಕಾರಿ ಆಸ್ಪತ್ರೆಗಳಲ್ಲಿ ಶೇ 78ರಷ್ಟು ಹಾಸಿಗೆ ಖಾಲಿ

ಕೋವಿಡ್: ಸರ್ಕಾರಿ ಆಸ್ಪತ್ರೆಗಳಲ್ಲೇ ಚಿಕಿತ್ಸೆ- ಆರೋಗ್ಯ ಇಲಾಖೆ ಸುತ್ತೋಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೋವಿಡ್‌ ಪ್ರಕರಣಗಳ ಸಂಖ್ಯೆ ಇಳಿಮುಖ ಆಗುತ್ತಿರುವ ಕಾರಣ ಸೋಂಕಿತರಿಗೆ ಸರ್ಕಾರಿ ಆಸ್ಪತ್ರೆ
ಗಳಲ್ಲಿಯೇ ಹಾಸಿಗೆ ಹಂಚಿಕೆ ಮಾಡಬೇಕು. ಶೇ 90 ರಷ್ಟು ಹಾಸಿಗೆಗಳು ಭರ್ತಿಯಾದಲ್ಲಿ ಮಾತ್ರ ಖಾಸಗಿ ಆಸ್ಪತ್ರೆಗಳಿಗೆ ಶಿಫಾರಸು ಮಾಡಬೇಕು ಎಂದು ಆರೋಗ್ಯ ಇಲಾಖೆ ಸೂಚಿಸಿ ಸುತ್ತೋಲೆ ಹೊರಡಿಸಿದೆ.

ಹೊಸ ಕೋವಿಡ್ ಪ್ರಕರಣಗಳ ಜತೆಗೆ ಮೃತರ ಸಂಖ್ಯೆ ಕೂಡ ಇಳಿಕೆಯಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಶೇ 22ರಷ್ಟು ಹಾಸಿಗೆಗಳು ಮಾತ್ರ ಭರ್ತಿಯಾಗಿದ್ದು, ಶೇ 78 ರಷ್ಟು ಹಾಸಿಗೆಗಳು ಖಾಲಿಯಿವೆ. ಹಾಗಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿಯೇ ಚಿಕಿತ್ಸೆಯನ್ನು ಮುಂದುವರಿಸಬೇಕು. ಪರಿಣಾಮಕಾರಿ ಚಿಕಿತ್ಸೆ ಲಭ್ಯವಿಲ್ಲದಿದ್ದಲ್ಲಿ ಖಾಸಗಿ ಆಸ್ಪತ್ರೆಗಳ ಹಾಸಿಗೆಗಳನ್ನು ಬಳಸಿಕೊಳ್ಳಬಹುದಾಗಿದೆ ಎಂದು ತಿಳಿಸಲಾಗಿದೆ.

ತುರ್ತು ಸಂದರ್ಭಗಳಲ್ಲಿ ಗಂಭೀರವಾಗಿ ಅಸ್ವಸ್ಥರಾದ ಸೋಂಕಿತರಿಗೆ ಅವಶ್ಯಕತೆಗೆ ಅನುಗುಣವಾಗಿ ಖಾಸಗಿ ಆಸ್ಪತ್ರೆಗಳ ತೀವ್ರ ನಿಗಾ ಘಟಕ (ಐಸಿಯು) ಹಾಗೂ ವೆಂಟಿಲೇಟರ್ ಸೌಲಭ್ಯಗಳಿಗಾಗಿ ಹಾಸಿಗೆಯನ್ನು ಹಂಚಿಕೆ ಮಾಡಬಹುದು. ಮುಂದಿನ ದಿನಗಳಲ್ಲಿ ಪ‍್ರಕರಣಗಳ ಸಂಖ್ಯೆ ಏರುಗತಿ ಪಡೆದರೆ ಪುನಃ ಖಾಸಗಿ ಆಸ್ಪತ್ರೆಗಳ ಹಾಸಿಗೆಗಳನ್ನು ಬಳಸಿಕೊಂಡು, ಶಿಫಾರಸು ಆಧಾರದಲ್ಲಿ ಚಿಕಿತ್ಸೆ ನೀಡಲಾಗುವುದು ಎಂದು ಹೇಳಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು