ಮಂಗಳವಾರ, ಸೆಪ್ಟೆಂಬರ್ 22, 2020
25 °C

ಬೆಂಗಳೂರು | ಮತ್ತೆ 2,105 ಮಂದಿಗೆ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊರೊನಾ ವೈರಸ್ ಸೋಂಕು ಪರೀಕ್ಷೆ–ಸಾಂದರ್ಭಿಕ ಚಿತ್ರ

ಬೆಂಗಳೂರು: ನಗರದಲ್ಲಿ ಹೊಸದಾಗಿ 2,105 ಮಂದಿ ಕೋವಿಡ್ ಪೀಡಿತರಾಗಿರುವುದು ಭಾನುವಾರ ದೃಢಪಟ್ಟಿದೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 59 ಸಾವಿರ ದಾಟಿದೆ. 

ಸೋಂಕಿತರ ಜತೆಗೆ ಚೇತರಿಸಿಕೊಳ್ಳುವವರ ಸಂಖ್ಯೆ ಕೂಡ ಏರಿಕೆಯಾಗುತ್ತಿದೆ. ಸೋಂಕಿತರಲ್ಲಿ 2,331 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ. ಒಟ್ಟು ಚೇತರಿಸಿಕೊಂಡವರ ಸಂಖ್ಯೆ 20 ಸಾವಿರದಾಟಿದೆ. ಕೋವಿಡ್ ಪೀಡಿತರಲ್ಲಿ ಮತ್ತೆ 21 ಮಂದಿ ಮೃತಪಟ್ಟಿದ್ದು, ಕೋವಿಡ್‌ನಿಂದ ಸಾವಿಗೀಡಾದವರ ಸಂಖ್ಯೆ 1,077ಕ್ಕೆ ಏರಿಕೆಯಾಗಿದೆ. ಭಾನುವಾರ ದೃಢಪಟ್ಟ ಮರಣ ಪ್ರಕರಣದಲ್ಲಿ ನಾಲ್ಕು ಮಂದಿ 50 ವರ್ಷದೊಳಗಿನವರು.

ಹೊಸದಾಗಿ ದೃಢಪಟ್ಟ ಪ್ರಕರಣಗಳಲ್ಲಿ ಪಶ್ಚಿಮ ವಲಯದಲ್ಲಿಯೇ ಅಧಿಕ ಮಂದಿ (610) ಸೋಂಕಿತರಾಗಿದ್ದಾರೆ. ದಕ್ಷಿಣ ವಲಯದಲ್ಲಿ 333, ಬೊಮ್ಮನಹಳ್ಳಿಯಲ್ಲಿ 236, ಪೂರ್ವ ವಲಯದಲ್ಲಿ 268, ಮಹದೇವಪುರದಲ್ಲಿ 117, ಆರ್.ಆರ್.ನಗರದಲ್ಲಿ 138, ಯಲಹಂಕದಲ್ಲಿ 83 ಹಾಗೂ ದಾಸರಹಳ್ಳಿಯಲ್ಲಿ 25 ಮಂದಿಗೆ ಸೋಂಕು ತಗುಲಿದೆ. ಕಳೆದ 10 ದಿನಗಳಿಂದ ಪಶ್ಚಿಮ ವಲಯದಲ್ಲಿ ಪ್ರಕರಣಗಳು ಹೆಚ್ಚುತ್ತಿದ್ದು, ಈ ಅವಧಿಯಲ್ಲಿ ನಗರದಲ್ಲಿ ಸೋಂಕಿತರಾದವರಲ್ಲಿ ಶೇ 24 ರಷ್ಟು ಮಂದಿ
ಆ ಭಾಗಕ್ಕೆ ಸೇರಿದವರಾಗಿದ್ದಾರೆ. 

37 ಸಾವಿರಕ್ಕೂ ಅಧಿಕ ಸೋಂಕಿತರು ಆಸ್ಪತ್ರೆಗಳು ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆಯುತ್ತಿದ್ದಾರೆ. 339 ರೋಗಿಗಳಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ. ನಗರದ ಜ್ವರ ಚಿಕಿತ್ಸಾಲಯಗಳಲ್ಲಿ ಒಂದೇ ದಿನ 3,001 ಮಂದಿಯನ್ನು ತಪಾಸಣೆ ಮಾಡಲಾಗಿದೆ. ಅಲ್ಲಿ ಈವರೆಗೆ ಒಟ್ಟು 56,848 ಮಂದಿಯನ್ನು ಪರೀಕ್ಷೆ ಮಾಡಲಾಗಿದೆ.‌

ನಗರದ ಕೋವಿಡ್ ಪ್ರಕರಣಗಳ ಅಂಕಿ–ಅಂಶ

ಒಟ್ಟು ಪ್ರಕರಣಗಳು;  59,501

ಗುಣಮುಖರಾದವರು; 20,910

ಸಕ್ರಿಯ ಪ್ರಕರಣಗಳು; 37,513

ಮೃತಪಟ್ಟವರು; 1,077

ಈ ದಿನದ ಏರಿಕೆ; 2,105

ಗುಣಮುಖರು; 2,331

ಮೃತಪಟ್ಟವರು; 21

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು