ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: ಬೆಂಗಳೂರಿನಲ್ಲಿ ಚೇತರಿಕೆ ಪ್ರಮಾಣ ಹೆಚ್ಚಳ

Last Updated 5 ಆಗಸ್ಟ್ 2020, 21:59 IST
ಅಕ್ಷರ ಗಾತ್ರ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್‌ನಿಂದ ಚೇತರಿಸಿಕೊಳ್ಳುವವರ ಪ್ರಮಾಣ ಒಂದು ವಾರದಿಂದ ಈಚೆಗೆ ಹೆಚ್ಚಳವಾಗುತ್ತಿದೆ. ಈ ವಾರದಲ್ಲಿ ಕೊರೊನಾ ಸೋಂಕು ತಗುಲಿದವರಿಗಿಂತ ಚೇತರಿಸಿಕೊಂಡವರ ಸಂಖ್ಯೆ ಜಾಸ್ತಿ ಇದೆ.

ಜುಲೈ 29ರಿಂದ ಆ.4ರವರೆಗೆ ಒಟ್ಟು 14,212 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದರೆ, 15,124 ಮಂದಿ ಗುಣಮುಖರಾಗಿದ್ದಾರೆ. ಈಚಿನ ಮೂರು ದಿನಗಳಲ್ಲಿ ಸೋಂಕು ಪತ್ತೆಯಾದವರಿಗಿಂತ ಕಾಯಿಲೆ ವಾಸಿಯಾದವರ ಸಂಖ್ಯೆ ದುಪ್ಪಟ್ಟು ಇದೆ.

‘ಈ ಹಿಂದೆ ಬಿಬಿಎಂಪಿ ವತಿಯಿಂದ ನಿತ್ಯ 3 ಸಾವಿರದಷ್ಟು ಪರೀಕ್ಷೆ ನಡೆಸಲಾಗುತ್ತಿತ್ತು. ಅದನ್ನು ಈಗ 6 ಸಾವಿರಕ್ಕೆ ಹೆಚ್ಚಿಸಿದ್ದೇವೆ. ನಗರದ ಖಾಸಗಿ ಆಸ್ಪತ್ರೆಗಳಲ್ಲೂ ನಿತ್ಯ 4 ಸಾವಿರ ಪರೀಕ್ಷೆಗಳು ನಡೆಯುತ್ತಿವೆ. ನಾವು ಕೋವಿಡ್‌ ಪರೀಕ್ಷೆಯ ಸಂಖ್ಯೆಯನ್ನು ಹೆಚ್ಚಿಸಿದ್ದರಿಂದ ಸೋಂಕಿತರ ಪ್ರಮಾಣವೂ ಹೆಚ್ಚಾಗಿತ್ತು. ಆದರೆ, ಈಗ ಸೋಂಕಿತರಿಗಿಂತ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಾಗಿರುವುದು ಉತ್ತಮ ಬೆಳವಣಿಗೆ’ ಎಂದು ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ತಿಳಿಸಿದರು.

‘ಕೋವಿಡ್‌ ಪರೀಕ್ಷೆಗಾಗಿ ಜನರ ಗಂಟಲ ದ್ರವ ಸಂಗ್ರಹಕ್ಕೆ ವಿಜ್ಞಾನ ಪದವೀಧರರನ್ನು ಬಳಸಿಕೊಳ್ಳಲು ಅರ್ಜಿ ಆಹ್ವಾನಿಸಿದ್ದೇವೆ. ಕೋವಿಡ್‌ ಪರೀಕ್ಷೆಯ ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸಲಿದ್ದೇವೆ. 10 ದಿನಗಳಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ನಿತ್ಯ 20 ಸಾವಿರ ಮಂದಿಯನ್ನು ಪರೀಕ್ಷೆಗೊಳಪಡಿಸಲು ಸಿದ್ಧತೆ ನಡೆದಿದೆ’ ಎಂದು ಅವರು ವಿವರಿಸಿದರು.

‘ಆದಷ್ಟು ಹೆಚ್ಚು ಮಂದಿಯನ್ನು ಪರೀಕ್ಷೆಗೊಳಪಡಿಸಿ,ಸೋಂಕನ್ನು ಆದಷ್ಟು ಬೇಗ ಪತ್ತೆ ಹಚ್ಚುವುದು ಹಾಗೂ ಸೋಂಕಿತರನ್ನು ಪ್ರತ್ಯೇಕಿಸಿ ರೋಗ ಹರಡದಂತೆ ತಡೆಯುವುದು ನಮ್ಮ ಉದ್ದೇಶ’ ಎಂದರು.

‘ನಗರದಲ್ಲಿ ಸೋಂಕಿನಿಂದ ಚೇತರಿಸಿಕೊಳ್ಳುವವರ ಪ್ರಮಾಣ ಉಳಿದ ನಗರಗಳಿಗಿಂತ ಕಡಿಮೆ ಇದೆ’ ಎಂದು ಪಾಲಿಕೆ ಕೌನ್ಸಿಲ್‌ ಸಭೆಯಲ್ಲಿ ವಿರೋಧ ಪಕ್ಷದ ಸದಸ್ಯರು ತರಾಟೆಗೆ ತೆಗೆದುಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT