ಶುಕ್ರವಾರ, ಅಕ್ಟೋಬರ್ 30, 2020
25 °C

ಕೋವಿಡ್: ‍ಪರೀಕ್ಷೆ ವಿಳಂಬ ಮಾಡಿದಲ್ಲಿ ದಂಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೋವಿಡ್ ಆರ್‌ಟಿ–ಪಿಸಿಆರ್ ಪರೀಕ್ಷಾ ಫಲಿತಾಂಶವನ್ನು 48 ಗಂಟೆಗಳ ಅವಧಿಯಲ್ಲಿ ನೀಡದ ಹಾಗೂ ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ತಿನ (ಐಸಿಎಂಆರ್) ವೆಬ್‌ ಪೋರ್ಟಲ್‌ನಲ್ಲಿ ನಮೂದಿಸದ ಖಾಸಗಿ ‍ಪ್ರಯೋಗಾಲಯಗಳಿಗೆ ಇನ್ನು ಮುಂದೆ ಪ್ರತಿ ಪರೀಕ್ಷೆಗೆ ನಿಗದಿತ ದರದ ಶೇ 10ರಷ್ಟು ದಂಡ ವಿಧಿಸಲಾಗುತ್ತದೆ. 

ಈ ಕುರಿತು ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಕೆಲವೆಡೆ ಕೋವಿಡ್‌ ಪರೀಕ್ಷೆಗಳ ಫಲಿತಾಂಶ ವಿಳಂಬವಾಗುತ್ತಿರುವುದು ಕೊರೊನಾ ಸೋಂಕು ಶಂಕಿತರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ಸರ್ಕಾರ ಈ ಕ್ರಮ ಕೈಗೊಂಡಿದೆ. 24 ಗಂಟೆಗಳಿಂದ 48 ಗಂಟೆಗಳ ಅವಧಿಯಲ್ಲಿ ಪರೀಕ್ಷೆಯ ಫಲಿತಾಂಶವನ್ನು ಒದಗಿಸಿ, ವೆಬ್ ಪೋರ್ಟಲ್‌ನಲ್ಲಿ ವಿವರ  ನಮೂದಿಸುವ  ಪ್ರಯೋಗಾಲಯಗಳಿಗೆ ಈಗಾಗಲೇ ನಿಗದಿಪಡಿಸಿದ ದರವನ್ನು ಪಾವತಿಸಲಾಗುತ್ತದೆ.

24 ಗಂಟೆಗಳ ಒಳಗಡೆಯೇ ಫಲಿತಾಂಶ ನೀಡಿ, ಪೋರ್ಟಲ್‌ನಲ್ಲಿ ಮಾಹಿತಿ ನಮೂದಿಸುವ ಪ್ರಯೋಗಾಲಯಗಳಿಗೆ ಪ್ರತಿ ಪರೀಕ್ಷೆಗೆ ನಿಗದಿತ ದರದ ಶೇ 10 ರಷ್ಟು ಪ್ರೋತ್ಸಾಹ ಧನ ನೀಡಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.‌ 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು