ಭಾನುವಾರ, ಆಗಸ್ಟ್ 9, 2020
22 °C

ಬೆಂಗಳೂರು | ಕೋವಿಡ್ ಪರೀಕ್ಷೆಗೆ ₹3 ಸಾವಿರ ದರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಪರೀಕ್ಷೆಗೆ ಸರ್ಕಾರ ಗರಿಷ್ಠ ₹3 ಸಾವಿರ ದರ ನಿಗದಿ ಮಾಡಿದೆ’ ಎಂದು ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ ಪ್ರಸಾದ್ ತಿಳಿಸಿದ್ದಾರೆ.

‘ಪಾಲಿಕೆ ವ್ಯಾಪ್ತಿಯ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಪರೀಕ್ಷೆ ನಡೆಸಲಾಗುವುದು. ಪರೀಕ್ಷೆ ನಂತರ ಮೊಬೈಲ್ ಸಂಖ್ಯೆಗೆ ಬರುವ ಬಿ.ಯು ನಂಬರ್ ಮಾಹಿತಿಯನ್ನು ಜೋಪಾನವಾಗಿ ಇಟ್ಟುಕೊಳ್ಳಬೇಕು. ಪರೀಕ್ಷೆಗೆ ಒಳಗಾದವರು ಫಲಿತಾಂಶ ಬರುವ ತನಕ ಮನೆಯಲ್ಲೇ ಇರಬೇಕು. ತುರ್ತು ಅವಶ್ಯಕತೆ ಇದ್ದರೆ 108 ಸಂಖ್ಯೆ ಕರೆ ಮಾಡಿ ತಿಳಿಸಬೇಕು’ ಎಂದು ಹೇಳಿದ್ದಾರೆ.

‘ಬಿಬಿಎಂಪಿ ಹಾಗೂ 108 ಆಂಬ್ಯುಲೆನ್ಸ್‌ ಮೂಲಕ ದಾಖಲಾಗುವ ಎಲ್ಲಾ ರೋಗಿಗಳ ಚಿಕಿತ್ಸಾ ವೆಚ್ವವನ್ನು ಮಾತ್ರ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ ಮೂಲಕ ಭರಿಸಲಾಗುತ್ತದೆ. ಪ್ರತೀ ಆಸ್ಪತ್ರೆಯಲ್ಲಿ ನೆರವಿಗಾಗಿ ಆರೋಗ್ಯ ಮಿತ್ರರನ್ನೂ ನೇಮಿಸಲಾಗಿದೆ’ ಎಂದಿದ್ದಾರೆ.

‘ಸ್ವಂತ ಖರ್ಚಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು. ಆದರೆ, ಸರ್ಕಾರ ನಿಗದಿಪಡಿಸಿರುವ ದರಕ್ಕಿಂತ ಹೆಚ್ಚಿನ ದರ ಪಡೆಯುವಂತಿಲ್ಲ. ಸಮಸ್ಯೆಗಳಿದ್ದಲ್ಲಿ 1800 425 8330 ಟೋಲ್‌ ಫ್ರೀ ಸಂಖ್ಯೆಗೆ ಕರೆ ಮಾಡಬಹುದು’ ಎಂದು ಮಾಹಿತಿ ನೀಡಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು